ಬೆಳಗಾವಿ-
ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಪಕ್ಷದ ಏಳಿಗೆ ಗೆ ಹಗಲಿರುಳು ಶ್ರಮಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷದ ಸೇವೆ ಸಲ್ಲಿಸಿ ಐತಿಹಾಸಿಕ ನೆಲದಲ್ಲಿ ಕಾಂಗ್ರೆಸ್ ಕಚೇರಿಯ ನಿರ್ಮಾಣಕ್ಕೆ ಕಾರಣೀಭೂತರಾಗಿ ರಾಜ್ಯ ಮಹಿಳಾ ಕಾಂಗ್ರೆಸ್ಸಿನ ರಾಜ್ಯಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸೇವೆ ಮಾಡಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಒಂದು ಲಕ್ಷ ಕ್ಕೂ ಅಧಿಕ ಮತ ಪಡೆದು ಶಾಸಕರಾಗಿ ಆಯ್ಕೆ ಆಗಿರುವ ಲಕ್ಷ್ಮೀ ಆರ್ ಹೆಬ್ಬಾಳಕರ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಇಂದು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಹೆಬ್ಬಾಳಕರ ಅವರ ಅಭಿಮಾನಿಗಳು ಪ್ರತಿಭಟಿಸಿದರು
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಬ್ಬಾಳಕರ ಅವರ ಪಕ್ಷದ ಸೇವೆ ನೋಡಿ ಅವರಿಗೆ ಮಂತ್ರಿಸ್ಥಾನ ಕೊಡಬೇಕು ಎಂದು ಪ್ರತಭಟನಾಕಾರರು ಒತ್ತಾಯಿಸಿದರು
ಕಾಂಗ್ರೆಸ್ ಮುಖಂಡ ಯುವರಾಜ ಕದಂ ಮಾತನಾಡಿ ಲಕ್ಷ್ಮೀ ಹೆಬ್ಬಾಳಕರ ಅವರು ಕಳೆದ ಇಪ್ಪತ್ತು ವರ್ಷಗಳಿಂದ ರಾಜಕೀಯ ಸಂಘರ್ಷ ಮಾಡಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷಕ್ಕೂ ಅಧಿಕ ಮತ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ ರಾಜಕೀರಂಗದಲ್ಲಿ ಅನೇಕ ಸವಾಲುಗಳನ್ನು ಎದುರಿಸಿ ಅಧಿಕಾರಕ್ಕೆ ಬಂದಿರುವ ಲಕ್ಷ್ಮೀ ಹೆಬ್ಬಾಳಕರ ಅವರ ಪಕ್ಷದ ಸೇವೆಯನ್ನು ಮನ್ನಿಸಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನ ಕೊಡಬೇಕು ಎಂದು ಯುವರಾಜ ಕದಂ ಒತ್ತಾಯ ಮಾಡಿದ್ರು
ಸಿಸಿ ಪಾಟೀಲ ಮಾತನಾಡಿ ಲಕ್ಷ್ಮೀ ಹೆಬ್ಬಾಳಕರ ಅವರು ಕಾಂಗ್ರೆಸ್ ಪಕ್ಷಕ್ಕೆ ಮಾಡಿರುವ ಸೇವೆ ಅವಿಸ್ಮರಣೀಯ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿತ್ತು ಇಂತಹ ಐತಿಹಾಸಿಕ ನೆಲದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ವಂತ ಕಚೇರಿ ಕಟ್ಟಡ ಇರಲಿಲ್ಲಿ ಲಕ್ಷ್ಮೀ ಹೆಬ್ಬಾಳಕರ ಅವರ ಹತ್ತಿರ ಯಾವ ಅಧಿಕಾರ ಇಲ್ಲದಿದ್ದರೂ ಬೆಳಗಾವಿ ನಗರದಲ್ಲಿ ಕಾಂಗ್ರೆಸ್ ಕಚೇರಿಯನ್ನು ನಿರ್ಮಿಸಿದ್ದಾರೆ ಕಳೆದ ಇಪ್ಪತ್ತು ವರ್ಷಗಳ ನಿಸ್ವಾರ್ಥ ಸೇವೆ ನೋಡಿ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಸಿಸಿ ಪಾಟೀಲ ಒತ್ತಾಯಿಸಿದರು
ಅಡಿವೇಶ ಇಟಗಿ ರಾಜಾಸಲೀಂ ಕಾಶಿಮನವರ ಬಾಗಣ್ಣ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಭಾಗವಹಿಸಿದ್ದರು