Breaking News

ಹುಕ್ಕೇರಿ ಹಿರೇಮಠದ ಶ್ರೀಗಳ ಆಶಿರ್ವಾದ ಪಡೆದ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ

ಜನರ ವಿಶ್ವಾಸಕ್ಕೆ ಧಕ್ಕೆ ಬರದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಇಡೀ ಗ್ರಾಮೀಣ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯುಲು ಶ್ರಮಿಸುವೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಭಾನುವಾರ ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠ ಶಾಖೆಯಲ್ಲಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಳೆದ ದಶಕಗಳಿಂದ ಗ್ರಾಮೀಣ ಕ್ಷೇತ್ರದ ಹಾಗೂ ಜಿಲ್ಲೆಯ ಜನರ ಸಂಪರ್ಕದಲ್ಲಿದ್ದೇನೆ. ಅವರ ಕಷ್ಟ ಕಾರ್ಪಣ್ಯಗಳನ್ನು ಅತ್ಯಂತ ಹತ್ತಿರದಿಂದ ಆಲಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನನ್ನ ಮೇಲೆ ಭರವಸೆ ಇಟ್ಟು ಬಹುಮತದಿಂದ ಆಯ್ಕೆ ಮಾಡಿದ ಜನತೆಯ ನಾನು ಸದಾ ಕಾಲ ಚಿರಋಣಿಯಾಗಿದ್ದೇನೆ ಎಂದು ಅವರು ಹೇಳಿದರು.

ಗ್ರಾಮೀಣ ಕ್ಷೇತ್ರದಲ್ಲಿ ಅನೇಕ ಗ್ರಾಮಗಳಲ್ಲಿ ಸುಸಜ್ಜಿತ ರಸ್ತೆ, ಕುಡಿಯುವ ನೀರಿ, ವಿದ್ಯುತ್ ಸಮಸ್ಯೆಗಳಿರುವುದು ನನ್ನ ಗಮನಕ್ಕೆ ಬಂದಿದ್ದು, ಎಲ್ಲ ಗ್ರಾಮಗಳಿಗೂ ಮೂಲಸೌಕರ್ಯ ಒದಗಿಸುವುದು ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಪ್ರಾಮಾಣಿಕವಾಗಿ ಈ ಭಾಗದಲ್ಲಿ ಅನುಷ್ಠಾನಗೊಳಿಸುವುದು ನನ್ನ ಪ್ರಮುಖ ಆಧ್ಯತೆಯಾಗಿದೆ ಎಂದರು.

ಜನರ ಆಶೆಯದಂತೆ ನೊಂದವರ ಹಾಗೂ ಅಸಹಾಯಕರಿಗೆ ಸದಾಕಾಲ ಸಹಾಯ ಹಸ್ತ ಚಾಚುವೆ. ಗ್ರಾಮೀಣ ಕ್ಷೇತ್ರದ ಯುವಕರಿಗೆ, ಮಹಿಳೆಯರಿಗೆ ಉದ್ಯೋಗ ಸೃಷ್ಠಿ ಮಾಡಲು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯರು ನನನ್ನು ಮಗಳಂತೆ ಕಂಡು ಸದಾಕಾಲ ಆಶೀರ್ವಧಿಸಿದ್ದಾರೆ. ಜನರ ಹಾಗೂ ಗುರುಗಳ ಆಶೀರ್ವಾದದಿಂದ ನಾನು ಶಾಸಕಿಯಾಗಿದ್ದೇನೆ. ಅಭಿವೃದ್ಧಿಯಲ್ಲಿ ಪಕ್ಷ, ಜಾತಿ, ಧರ್ಮ ಭೇದ-ಭಾವ ಮಾಡದೆ ಕಾರ್ಯಮಾಡುವೆ. ಜತೆಗೆ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಒಂದು ವೇಳೆ ರಾಜಕೀಯ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇನೆ ಎಂದರು.

ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ರೈತ ಕುಟುಂಬದಿಂದ ಬಂದ ಮಹಿಳೆ ಕಾಂಗ್ರೆಸ್ ಪಕ್ಷದಲ್ಲಿ ಜಿಲ್ಲಾಧ್ಯಕ್ಷೆಯಾಗಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕವಾಗಿ ಪಕ್ಷ ಹಾಗೂ ಮಹಿಳಾ ಸಂಘಟನೆ ಮಾಡುವಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅಲ್ಲದೆ ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸ್ಥಾನಮಾನಗಳು ಇವರಿಗೆ ಲಭಿಸಲಿ ಎಂದು ಹಾರೈಸಿದರು.

ಜತೆಗೆ ಜನರ ಭಾವನೆಗಳಿಗೆ ಧಕ್ಕೆ ಬಾರದಂತೆ ಅಭಿವೃದ್ಧಿ ಹಾಗೂ ಜನೋಪಯೋಗಿ ಕಾರ್ಯಗಳನ್ನು ಮಾಡಲಿ ಎಂದು ಆಶೀರ್ವಧಿಸಿದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *