ಬೆಳಗಾವಿ- ಗಡಿಭಾಗದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಥಿಲಾವಸ್ಥೆಯಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳ ದುರಸ್ತಿಗೆ ವಿಶೇಷ ಅನುದಾನ ನೀಡುವಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಶಿಕ್ಷಣ ಸಚಿವ ಎನ್ ಮಹೇಶ ಅವರಿಗೆ ಮನವಿ ಸಲ್ಲಿಸಿದ್ದಾರೆ
ವಿಧಾನಸಭೆಯಲ್ಲಿ ಶಿಕ್ಷಣ ಸಚಿವ ಎನ್ ಮಹೇಶ್ ಅವರನ್ನು ಭೇಟಿಯಾದ ಲಕ್ಷ್ಮೀ ಹೆಬ್ಬಾಳಕರ ಗ್ರಾಮೀಣ ಕ್ಷೇತ್ರದಲ್ಲಿರುವ ಕನ್ನಡ ಹಾಗೂ ಮರಾಠಿ ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು ಶಾಲೆಗಳ ದುರಸ್ಥಿಗೆ 9 ಕೋಟಿ ರೂ ವಿಶೇಷ ಅನುದಾನ ನೀಡುವಂತೆ ಲಕ್ಷ್ಮೀ ಹೆಬ್ಬಾಳಕರ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿಕೊಂಡರು
ಗಡಿಭಾಗದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಡ ಶಾಲಾ ಕಟ್ಟಡಗಳ ಸ್ಥಿತಿಗತಿಯ ಬಗ್ಗೆ ಬೆಳಗಾವಿ ಜಿಲ್ಲಾ ಶಿಕ್ಷಣಾಧಿಕಾರಿಗಳು ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿ ಈ ಹಿಂದೆಯೇ ಸರ್ಕಾರಕ್ಕೆ ವಿಶೇಷ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಪ್ರಸ್ತಾವನೆ ಸಲ್ಲಿಸಿ ಹಲವಾರು ವರ್ಷಗಳು ಗತಿಸಿದ್ದು ಗ್ರಾಮೀಣ ಕ್ಷೇತ್ರದ ಎಲ್ಲ ಶಾಲೆಗಳ ದುರಸ್ತಿಗೆ ಕೂಡಲೇ ವಿಶೇಷ ಅನುದಾನ ನೀಡಬೇಕೆಂದು ಲಕ್ಷ್ಮೀ ಹೆಬ್ಬಾಳಕರ ಸಚಿವರಲ್ಲಿ ಮನವಿ ಮಾಡಿಕೊಂಡರು
ಲಕ್ಷ್ಮೀ ಹೆಬ್ಬಾಳಕರ ಅವರ ಮನವಿಗೆ ಸ್ಪಂದಿಸಿದ ಶಿಕ್ಷಣ ಸಚಿವ ಎನ್ ಮಹೇಶ ಗಡಿಭಾಗದ ಶಾಲೆಗಳ ಅಭಿವೃದ್ಧಿ ಹಾಗೂ ದುರಸ್ತಿಗೆ ವಿಶೇಷ ಅನುದಾನ ನೀಡುವದಾಗಿ ಭರವಸೆ ನೀಡಿದ್ದಾರೆ