ನನ್ನ ಮಹಾಗುರು ಸತೀಶ – ಲಕ್ಷ್ಮೀ ಹೆಬ್ಬಾಳರ

ಬೆಳಗಾವಿ ತಾಲೂಕಿನ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕ ಸತೀಶ ಜಾರಕಿಹೊಳಿ ನಾನು ಸದಸ್ಯರನ್ನು ಅಪಹರಣ ಮಾಡಿದ್ದಾರೆ ಎಂಬ ಆರೋಪಕ್ಕೆ ಪೊಲೀಸರು ಬಿ ಫಾರ್ಮ್ ನೀಡಿದ್ದಾರೆ. ಇನ್ನೆರಡು ದಿನದಲ್ಲಿ ಚುನಾವಣೆ ನಿಗಧಿ ಪಡಿಸದಿದ್ದಲ್ಲಿ ಗ್ರಾಮೀಣ ಭಾಗದ ಜನರೊಂದಿಗೆ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುವುದಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಿಎಲ್‍ಡಿ ಚುನಾವಣೆ ಮುಂದುಡಿಕೆಯ ಬಗ್ಗೆ ಈಗಾಗಲೇ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅವರು ಎರಡು ದಿನದಲ್ಲಿ ಚುನಾವಣೆ ದಿನಾಂಕ ನಿಗದಿ ಮಾಡುವ ವಿಶ್ವಾಸ ನೀಡಿದ್ದಾರೆ ಎಂದರು.

ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ನನ್ನ ಗುರು. ಅವರ 30 ವರ್ಷದ ರಾಜಕೀಯದಲ್ಲಿ ರಾಜ್ಯ, ರಾಷ್ಟ್ರೀಯ ರಾಜಕಾರಣದಲ್ಲಿ ತಮ್ಮದೆಯಾದ ಛಾಪು ಮೂಡಿಸಿದ್ದಾರೆ. ನನದು ಕೇವಲ 3 ತಿಂಗಳೂ ಆದರೆ ಹೆಣ್ಣಿಗೆ ಇಷ್ಟೊಂದು ತೊಂದರೆ ಕೊಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕಿನ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ವಿನಾಕಾರಣ ನಾನು ಬ್ಯಾಂಕ್‍ನ ಸದಸ್ಯರನ್ನು ಅಪಹರಣ ಮಾಡಿದ್ದೇನೆ ಎಂದು ಸುಳ್ಳು ಆರೋಪಿಸಿದ್ದರು. ಅದಕ್ಕೆ ಪೊಲೀಸರು ಅಪಹರಣ ಮಾಡಿಲ್ಲ. ಬ್ಯಾಂಕ್ ಸದಸ್ಯ ಪರಶುರಾಮ್ ನಮ್ಮೊಂದಿಗೆ ಇದ್ದಾರೆ. ತಹಸೀಲ್ದಾರ ಅಪಹರಣ ಆಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲನೆ ನಡೆಸದೆಯೇ ಚುನಾವಣೆಯನ್ನು  ಮುಂದುಡಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಕಣ್ಣಿಗೆ ಕಾಣದ ವ್ಯಕ್ತಿಗಳು ಸೋಮವಾರ ಗಲಾಟೆ ಮಾಡಿ ಕಾನೂನು ಸುವ್ಯವಸ್ಥೆ ಹಾಳು ಮಾಡುವ ಹುನ್ನಾರ ನಡೆಸಿದರು. ಪ್ರಜಾಪ್ರಭುತ್ವದಲ್ಲಿ ಸತೀಶ ಜಾರಕಿಹೊಳಿ ಬೆಂಬಲಿಗರು ಗಲಾಟೆ ಮಾಡಿ ಕಗ್ಗೊಲೆ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿಯೂ ನನಗೆ ಕಿರುಕುಳ ನೀಡಿದರು. ಅವರ ಅನುಭವದ ಮುಂದೆ ನಾನು ಏನೂ ಅಲ್ಲ. ಇಂಥ ನೀಚ ರಾಜಕಾರಣ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *