ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಸುವರ್ಣ ವಿಧಾನಸೌಧದಲ್ಲಿ ಕಲಾಪಗಳು ನಡೆಯುತ್ತಿವೆ ಜೊತೆಗೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಚಾಲನೆ ನೀಡುತ್ತಿದ್ದಾರೆ
ಕ್ಷೇತ್ರದ ಕರೀಕಟ್ಟಿ ಗ್ರಾಮದಲ್ಲಿ ನೀರಾವರಿ ಇಲಾಖೆಯ ಒಂದು ಕೋಟಿ ರೂ ಅನುದಾನದಲ್ಲಿ ಎರಡು ಕಿಮೀ ಮುಖ್ಯ ರಸ್ತೆ ಕಾಮಗಾರಿಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು ಕಾಮಗಾರಿಗೆ ಚಾಲನೆ ನೀಡಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು ಕ್ಷೇತ್ರದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಕ್ಷೇತ್ರದ ಅಭಿವೃದ್ಧಿಗೆ ಏನೇನು ಬೇಕು ಅನ್ನೋದನ್ನ ಪಟ್ಟಿ ಮಾಡಿ ಸಮಂಧಿಸಿದ ಇಲಾಖೆಗಳ ಸಚಿವರನ್ನು ಭೇಟಿಯಾಗಿ ಕಾಮಗಾರಿಗಳಿಗೆ ಮಂಜೂರಾತಿ ಪಡೆಯುವ ಪ್ರಯತ್ನ ಮುಂದುವರೆದಿದೆ ಎಚಿದರು
ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳನ್ನು ಆರಂಭಿಸಲಾಗಿದೆ ಇನ್ನೂ ಹಲವಾರು ರಸ್ತೆ ಕಾಮಗಾರಿಗಳ ಟೆಂಡರ್ ಕರೆಯಲಾಗಿದೆ ಕೆಲವು ಕಾಮಗಾರಿಗಳಿಗೆ ಮಂಜೂರಾತಿ ಪಡೆಯುಲಾಗುತ್ತಿದೆ ಕ್ಷೇತ್ರದಲ್ಲಿ ಕೆರೆ ತುಂಬಿಸುವ ಮಹತ್ವದ ಯೋಜನೆಯ ಸರ್ವೆ ಕಾರ್ಯ ನಡೆಯುತ್ತದೆ ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪೂರ್ಣ ಪ್ರಮಾಣದ ಅಭಿವೃದ್ಧಿ ಕಾಮಗಾರಿಗಳು ಕಾಣಿಸಲಿವೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು
ಮಹೇಶ ಸುಗೈನ್ನವರ,ನಿತೀಶ ಚಂದಗಡಕರ,ತೌಸೀಫ ಫನೀಬಂಧ,ವಿಠ್ಠಲ ಬಂಡಿಗೇರ್,ಲಗವ್ಮಣ್ಣಾ ಸುಲಧಾಳ,ಮಹಾದೇವ ಬುಡರಿ ತುಕಾರಾಮ ಕರಡಿಗುದ್ದಿ,ದುರ್ಗಪ್ಪಾ ದಾಸನಟ್ಟಿ,ಬಸಪ್ಪಾ ಸುಲಧಾಳ,ತೋಪಣ್ಣಾ ಪ್ರಜಾರಿ,ಸಂತೋಷ ಬೂಧಿಹಾಳ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಉಪಸ್ಥಿತರಿದ್ದರು
.