Breaking News

ಅಭ್ಯರ್ಥಿ ಯಾರೇ ಆಗಲಿ ಪಕ್ಷದ ಗೆಲುವಿಗೆ ಹಗಲಿರಳು ಶ್ರಮಿಸುವೆ – ಲಕ್ಷ್ಮೀ ಹೆಬ್ಬಾಳಕರ

ಲೋಕಸಭೆ ಚುನಾವಣೆ ಘೋಷಣೆಯಾಗದಿದ್ದರೂ ಕಾಂಗ್ರೆಸ್ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಸಿದ್ಧತೆ ಆರಂಭಿಸಿದೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬೂತ್ ಮಟ್ಟದ ಕಾರ್ಯಕರ್ತರಿಗೆ ಚುನಾವಣೆಯ ತರಬೇತಿ ಶಿಬಿರ ಏರ್ಪಡಿಸಿ 2019 ರ ರಣರಂಗಕ್ಕೆ ರಣಕಹಳೆ ಊದಿದ್ದಾರೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ತರಬೇತಿ ಶಿಬಿರ ಮತ್ತು ಲೋಕಸಭಾ ಚುನಾವಣೆಯ ಸಿದ್ಧತಾ ಶಿಭಿರ ಇಂದು ಬೆಳಗಾವಿಯ ಕೆಪಿಟಿಸಿಎಲ್ ಹಾಲ್ ನಲ್ಲಿ ಜರುಗಿತು ಶಿಭಿರವನ್ನು ಹಿರಿಯ ಕಾಂಗ್ರೆಸ್ ಮುಖಂಡ ಈರಣ್ಣಾ ಮತ್ತಿಕಟ್ಟಿ ಉದ್ಘಾಟಿಸಿದರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಹಲವಾರು ಜನ ಕಾಂಗ್ರೆಸ್ ಮುಖಂಡರು ಸಾವಿರಕ್ಕೂ ಹೆಚ್ವು ಕಾರ್ಯಕರ್ತರು ಶಿಭಿರದಲ್ಲಿ ಭಾಗವಹಿಸಿದ್ದರು ಆರಂಭದಲ್ಲಿ ಉಗ್ರರ ದಾಳಿಗೆ ವೀರಮರಣ ಹೊಂದಿದ ಯೋಧರಿಗೆ ಒಂದು ನಿಮಿಷ ಮೌನ ಆಚರಿಸಿ ಶೃದ್ಧಾಂಜಲಿ ಅರ್ಪಿದಲಾಯಿತು

ಲೋಕಸಭೆ ಚುನಾವಣೆಯ ಶಿಬಿರ ಉದ್ಘಾಟಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಈರಣ್ಣಾ ಮತ್ತಿಕಟ್ಟಿ ರಾಹುಲ್ ಗಾಂಧಿ ಅವರನ್ನು ಮುಂದಿನ ಪ್ರಧಾನಿ ಮಾಡುವದೇ ನಮ್ಮ ಮುಖ್ಯ ಗುರಿಯಾಗಿದೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಾಡ್ಯವಾಗಿದೆ ಈ ಕ್ಷೇತ್ರದ ಕಾರ್ಯಕರ್ತರು ಹೆಚ್ವಿನ ಅನುಭವ ಪಡೆದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಸಂಕಲ್ಪ ಮಾಡಿ ಈಗಿನಿಂದಲೇ ಪಕ್ಷದ ಸಂಘಟನೆಯಲ್ಲಿ ಕ್ರಿಯಾಶೀಲ ಆಗಬೇಕೆಂದರು

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ ಬೆಳಗಾವಿ ಲೋಕಸಭಾ ಕ್ಷೇತ್ರ ಅತೀ ದೊಡ್ಡ ಕ್ಷೇತ್ರವಾಗಿದೆ ಪಕ್ಷದ ಹೈಕಮಾಂಡ್ ಬೇಗನೆ ಅಭ್ಯರ್ಥಿ ಘೋಷಣೆ ಮಾಡಿದರೆ ಘೋಷಿತ ಅಭ್ಯರ್ಥಿ ಕ್ಷೇತ್ರದಲ್ಲಿ ಸಂಚರಿಸಿ ಮತಯಾಚಿಸಲು ಅನಕೂಲವಾಗುತ್ತದೆ.ಪಕ್ಚ ಯಾರನ್ನಾದರೂ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಿ ಇದು ನನ್ನ ಸ್ವಂತ ಚುನಾವಣೆ ಎಂದು ತಿಳಿದುಕೊಂಡು ಪಕ್ಷದ ಗೆಲುವಿಗೆ ಶ್ರಮಿಸುವೆ,ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಅತೀ ಹೆಚ್ವು ಮತಗಳನ್ನು ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಲಕ್ಷ್ಮೀ ಹೆಬ್ಬಾಳಕರ ಭರವಸೆ ನೀಡಿದರು

ಶಾಸಕಿಯಾಗಿ ನುಡಿದಂತೆ ನಡೆಯುತ್ತಿದ್ದೇನೆ ಕ್ಷೇತ್ರದ ಹಳ್ಳಿ,ಹಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಸಂತಿಬಸ್ತವಾಡ,ಮತ್ತು ವಾಘವಾಡೆ ಗ್ರಾಮಗಳ ಆಂತರಿಕ ರಸ್ತೆಗಳ ಸುಧಾರಣೆಗೆ 7.5 ಕೋಟಿ ಹಿರೇಬಾಗೇವಾಡಿಯ ಬಸವೇಶ್ವರ ವೃತ್ತದ ಸುಂದರೀಕರಣಕ್ಕೆ 5 ಲಕ್ಷ,ಹಾಗೂ ರಾಜಹಂಸಗಡ ದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್‌ ಪುತ್ಥಳಿ ಸ್ಥಾಪನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 50 ಲಕ್ಷ ರೂ ಗಳನ್ನು ಮಂಜೂರು ಮಾಡಿಸಿದ್ದೇನೆ ಕೊಟ್ಟ ಭರವಸೆಗಳಿಂದೆ ಹಿಂದೆ ಸರಿಯುವ ಹೆಣ್ಣು ನಾನಲ್ಲ ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದರು

ಒಟ್ಟಾರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ಪರ್ವ ಆರಂಭವಾಗಿದ್ದು ಕಾರ್ಯಕರ್ತರಿಗೆ ಚುನಾವಣೆಯ ತರಬೇತಿ ನೀಡುವ ಶಿಬಿರಗಳಿಗೆ ಚಾಲನೆ ದೊರೆತಿದೆ

Check Also

ಶಿವಸಾಗರ ಸಕ್ಕರೆ ಕಾರ್ಖಾನೆ ಮಾರಾಟ, ಸಿಡಿದೆದ್ದ ಷೇರುದಾರರು, ಡಿಸಿ ಕಚೇರಿಯಲ್ಲಿ ಹಠಾತ್ ಸಭೆ…!!

ಶಿವಸಾಗರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದ ಷೇರುದಾರರು, ರೈತರು.. ಬೆಳಗಾವಿ ಡಿಸಿ ನೀಡಿದ ಭರವಸೆ ಏನು? ಬೆಳಗಾವಿ: …

Leave a Reply

Your email address will not be published. Required fields are marked *