Breaking News

ರಾಜ್ಯ ಮಹಿಳಾ ಕಾಂಗ್ರೆಸ್ ನಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ..

ಬೆಳಗಾವಿ- ಮಾಜಿ ಪ್ರದಾನಿ ದಿ ಇಂದಿರಾ ಗಾಂಧಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಇದೇ ತಿಂಗಳ 18 ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ ಮಾಡುವದಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ

ಮಾಜಿ ಪ್ರಧಾನಿ ದಿ ಇಂದಿರಾ ಗಾಂಧಿ ಮಹಿಳಾ ಕುಲಕ್ಕೆ ಸ್ಪೂರ್ತಿಯ ಸೆಲೆಯಾಗಿದು ಅವರು ಮಾಡಿರುವ ಸಾಮಜಿಕ ಕಾರ್ಯಗಳು ಬಡವರ ಪರವಾಗಿ ಅವರು ಜಾರಿಗೆ ತಂದ ಯೋಜನೆಗಳು ಜಗತ್ತಿಗೆ ಮಾದರಿಯಾಗಿದ್ದು ಅವರ ಸಾಧನೆಯ ಸ್ಮರಣೆಯ ಗೋಸ್ಕರ 18 ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಮಹಿಳೆಯರು ಅನುಭವಿಸುತ್ತಿರುವ ಸಮಸ್ಯಗಳನ್ನು ಮನವರಿಕೆ ಮಾಡಿಕೊಳ್ಳಲಾಗುವದು ಎಂದು ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ

ರಾಜ್ಯ ಮಹಿಳಾ ಕಾಂಗ್ರೆಸ್ ಸಮೀತಿಯ ಪದಾಧಿಕಾರಿಗಳು ಲಕ್ಷ್ಮೀ ಹೆಬ್ಬಾಳಕರ ಅವರ ನೇತ್ರತ್ವದಲ್ಲಿ ಚಿಕ್ಕಮಂಗಳೂರ ಜಿಲ್ಲೆಯ ಕಡೂರಿನಲ್ಲಿ ಗಾಮ ವಾಸ್ತವ್ಯ ಮಾಡಲಿದ್ದಾರೆ  ಜೊತೆಗೆ ರಾಜ್ಯದ ಎಲ್ಲ ಜಿಲ್ಲೆಗಳ ಮಹಿಳಾ ಅದ್ಯಕ್ಷರುಗಳು ಜಿಲ್ಲಾ ಸಮೀತಿಯ ಪದಾಧಿಕಾರಿಗಳ ಜೊತೆಗೆ ಆಯಾ ಜಿಲ್ಲೆಗಳ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ

ಸಮಾಜದಲ್ಲಿ ಮಹಿಳಾ ಸಮಾನತೆ ತರುವ ಗ್ರಾಮ ವಾಸ್ತವ್ಯದ ಮುಖ್ಯ ಉದ್ದೇಶವಾಗಿದೆ ಮಹಿಳೆಯರು ಅನೇಕ ಸಾಮಾಜಿಕ ಸಮಸ್ಯಗಳನ್ನು ಎದುರಿಸುತ್ತಿದ್ದಾರೆ ಅವರೂ ಕೂಡಾ ಸಮಾಜದ ಮುಖ್ಯವಾಹಿನಿಗೆ ಬರುವ ಇಚ್ಛಾಶಕ್ತಿಯನ್ನು ಹೊಂದಿದ್ದಾರೆ ಆದರೆ ಅನೇಕ ಸಮಸ್ಯಗಳಿಂದಾಗಿ ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ,ರಾಜಕೀಯವಾಗಿ ಬೆಳೆಯಲು ಸಾಧ್ಯವಾಗುತ್ತಿಲ ಅವರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅದಕ್ಕೆ ಪರಿಹಾರ ಕಂಡು ಹಿಡಿಯುವ ಪ್ರಯತ್ನವನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಘಟಕ ಮಾಡುತ್ತಿದೆ ಎಂದು ಹೆಬ್ಬಾಳಕರ ತಿಳಿಸಿದ್ದಾರೆ

ಒಂದು ದಿನ ಗ್ರಾಮೀಣ ಪ್ರದೇಶಗಲ್ಲಿ ಗ್ರಾಮ ವಾಸ್ತವ್ಯ ಮಾಡಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ಮಾಡಿ ಅದಕ್ಕೆ ಯಾಯ ರೀತಿಯ ಪರಿಹಾರ ಸಿಗಬಹುದು ಅನ್ನೋದರ ಬಗ್ಗೆ ಸಮಾಲೋಚನೆ ಮಾಡಿ ಕೇಂದ್ರ ಹಾಗು ರಾಜ್ಯ ಸಕಾರಗಳು ಮಹಿಳಾ ಸಬಲೀಕರಣಕ್ಕೆ ಯಾವ ರೀತಿಯ ಸಹಾಯ ಒದಗಿಸಲು ಸಾಧ್ಯವಿದೆ ಎಂಬುವದನ್ನು ತಿಳಿದುಕೊಂಡು ಗ್ರಾಮ ವಾಸ್ತವ್ಯ ಮಾಡಿದ ಜಿಲ್ಲಾಧ್ಯಕ್ಷರಿಂದ ವರದಿ ಪಡೆದು ಮಹಿಳೆಯರ ಕಲ್ಯಾಣಕ್ಕಾಗಿ ಕೇಂದ್ರ ಹಾಗು ರಾಜ್ಯ ಸಕಾರಗಳು ಯಾವ ರೀತಿಯಲ್ಲಿ ಸಹಾಯ ಮಾಡಬೇಕು ಅನ್ನೋದರ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಅರ್ಪಿಸಿ ಮಹಿಳೆಯರಿಗೆ ಹೆಚ್ಚಿನ ಅನಕೂಲ ಕಲ್ಪಿಸುವದು ಗ್ರಾಮ ವಾಸ್ತವ್ಯದ ಮುಖ್ಯ ಉದ್ದೇಶವಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *