ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಭಾರತೀಯ ಜನತಾ ಪಕ್ಷ ಅಯೋದ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುತ್ತಿದ್ದು,ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಎರಡು ಲಕ್ಷ ರೂ ದೇಣಿಗೆ ನೀಡುವ ಮೂಲಕ ಭಕ್ತಿಯ ಭಂಡಾರ ಹರಿಸಿದ್ದಾರೆ.
ದೇಶಾದ್ಯಂತ ಶ್ರೀ ರಾಮ ಮಂದಿರ ನಿರ್ಮಾಣಕ್ಕೊಸ್ಕರ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಎನ್ನುವ ಹೆಸರಿನಲ್ಲಿ ನಿಧಿ ಸಂಗ್ರಹಣ ಟ್ರಸ್ಟ್ ಸ್ಥಾಪನೆಯಾಗಿದ್ದು, ಇವತ್ತು ಈ ಟ್ರಸ್ಟಿಗೆ ಎರಡು ಲಕ್ಷ ರೂಪಾಯಿಗಳ ಚೆಕ್ ನ್ನು ಅದರ ಪದಾಧಿಕಾರಿಗಳಿಗೆ ಹಸ್ತಾಂತರಿಸಿದೆ.
ಈ ಸಂದರ್ಭದಲ್ಲಿ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿ, ಟ್ರಸ್ಟಿನ ಪದಾಧಿಕಉಪಸ್ಥಿತರಿದ್ದರುೃಷ್ಣ ಭಟ್, ಪರಮೇಶ್ವರ ಹೆಗಡೆ, ವಿಶಾಲ ಖಂಡಗ್ಲೆ, ವಿಧ್ಯಾಭಾರತಿ, ವಿನೋಧ ಶಾನಭಾಗ್, ಗುರುದತ್ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ