Breaking News

ಲಕ್ಷ್ಮೀ ಹೆಬ್ಬಾಳಕರ ಪ್ರಚಾರಕ್ಕಾಗಿ, ಶಿವರಾಜ್ ಕುಮಾರ್‌

ನಾಳೆ ಲಕ್ಷ್ಮೀ ಹೆಬ್ಬಾಳಕರ ಪರ ಪ್ರಚಾರಕ್ಕೆ ಆಗಮಿಸಲಿದ್ದಾರೆ ಹ್ಯಾಟ್ರಿಕ್ ಹೀರೊ ಶಿವರಾಜಕುಮಾರ್

ಬೆಳಗಾವಿ: ಹ್ಯಾಟ್ರಿಕ್ ಹೀರೊ ಶಿವರಾಜಕುಮಾರ್ ಅವರು ನಾಳೆ ಮೇ 6ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಪರ ಅವರು ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

ಸಂಜೆ 4 ಗಂಟೆಗೆ ಬೆಳಗಾವಿ ತಾಲೂಕಿನ ಸುಳೆಬಾವಿಗೆ ಆಗಮಿಸಲಿರುವ ಅವರು ಅಲ್ಲಿನ ಶ್ರೀ ಮಹಾಲಕ್ಷ್ಮೀ ದೇವಿ ದರ್ಶನ ಪಡೆದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಚುನಾವಣೆ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.

5 ಗಂಟೆಗೆ ಶಿಂದೊಳ್ಳಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 7 ಗಂಟೆಗೆ ಹೊನ್ನಿಹಾಳ ಗ್ರಾಮದಲ್ಲಿ ರೋಡ್ ಶೋ ನಡೆಸಲಿದ್ದಾರೆ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *