ಬೆಳಗಾವಿ- ನಿರಂತರ ರಾಜಕೀಯ ಸಂಘರ್ಷ ನಡೆಸಿ,ಘಟಾನುಘಟಿ ರಾಜಕೀಯ ನಾಯಕರ ಪ್ರತಿರೋಧ ಎದುರಿಸಿ ಎರಡನೇಯ ಬಾರಿಗೆ ವಿಧಾನಸೌಧದ ಮೆಟ್ಟಲೇರಿ,ಮಂತ್ರಿಯೂ ಆಗಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಹತ್ವದ ಉಸ್ತುವಾರಿ ಸಿಗುವ ಸಾಧ್ಯತೆ ಇದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗುವದು ಬಹುತೇಕ ಖಚಿತವಾಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಹುಬ್ಬಳ್ಳಿ- ಧಾರವಾಡ ಜಿಲ್ಲಾ ಉಸ್ತುವಾರಿಯ ಜವಾಬ್ದಾರಿ ಕೊಡ್ತಾರೆ ಎನ್ನುವ ಸುದ್ದಿ ವ್ಯಾಪಕ ಪ್ರಚಾರ ಪಡೆದುಕೊಂಡಿದೆ.
ಲಕ್ಷ್ಮೀ ಹೆಬ್ಬಾಳಕರ ಅವರು,ಮಹಿಳಾ ಮತ್ತು ಮಕ್ಕಳ ಕಲ್ಯಾಣ,ವಿಕಲಚೇತನರ ಸಬಲೀಕರಣ,ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾಗಿದ್ದು,ಮುಖ್ಯಮಂತ್ರಿ ಸಿದ್ರಾಮಯ್ಯನವರ ಸಂಪುಟದಲ್ಲಿ ಮಹತ್ವದ ಜವಾಬ್ದಾರಿ ವಹಿಸಿಕೊಂಡಿದ್ದು, ಈಗ ಪಕ್ಕದ ಪ್ರಭಾವಿ ಜಿಲ್ಲೆಯಾಗಿರುವ ಹುಬ್ಬಳ್ಳಿ- ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವರ ಸ್ಥಾನ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ನೀಡಲು ಪಕ್ಷದ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ಬೆಳಗಾವಿ ಸುದ್ದಿ ಡಾಟ್ ಕಾಮ್ ಗೆ ನಂಬಲರ್ಹ ಮೂಲಗಳಿಂದ ತಿಳಿದು ಬಂದಿದ್ದು, ಈ ವಿಚಾರಕ್ಕೆ ಶಾಸಕ ವಿನಯ ಕುಲಕರ್ಣಿ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಪಕ್ಷದಲ್ಲಿ ಪವರ್ ಫುಲ್ ನಾಯಕಿಯಾಗಿ ಹೊರಹೊಮ್ಮಿರುವ ಲಕ್ಷ್ಮೀ ಹೆಬ್ಬಾಳಕರ ಮೇಡಂ ಅವರು ಈಗ ಪವರ್ ಫುಲ್ ಜಿಲ್ಲೆಯ ಪವರ್ ಫುಲ್ ಇನ್ ಚಾರ್ಜ್ ಮಿನಿಸ್ಟರ್ ಆಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ.