ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಗೆ,ಶುಭ ಮಂಗಳ. ವಾರ…!!
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕದ ಯಜಮಾನಿ ಮಹಿಳೆಗೆ ರೂ.2000 ಪ್ರತಿ ತಿಂಗಳು ನೀಡುವಂತ ಗೃಹ ಲಕ್ಷ್ಮೀ ಯೋಜನೆ ಘೋಷಿಸಿತ್ತು. ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ.
ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಯಾವತ್ತಿನಿಂದ ಆರಂಭ?
ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ವಿವಿಧ ಕಾರಣಗಳಿಂದ ಜೂನ್.15ರಿಂದ ಆರಂಭಗೊಳ್ಳಬೇಕಿದ್ದಂತ ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆ ಆರಂಭಗೊಂಡಿರಲಿಲ್ಲ. ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಕೆಗೆ ಎಲ್ಲಾ ಸಿದ್ಧತೆ ಪೂರ್ಣಗೊಂಡ ನಂತ್ರ ಆರಂಭಿಸಲಾಗುತ್ತಿದೆ ಎಂದರು.
ಗೃಹ ಲಕ್ಷ್ಮೀ ಯೋಜನೆಗೆ ಮನೆಯ ಕುಟುಂಬದ ಯಜಮಾನಿ ಮಹಿಳೆಯ ಪ್ರತಿ ತಿಂಗಳು ರೂ.2000 ಪಡೆಯುವುದಕ್ಕಾಗಿ ಜೂನ್.27ರ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತಿದೆ. ಆಗಸ್ಟ್ 17 ಅಥವಾ 18ರಂದು ಯಜಮಾನಿ ಮಹಿಳೆಯ ಖಾತೆಗೆ ಹಣ ಜಮೆ ಆಗಲಿದೆ ಎಂದು ತಿಳಿಸಿದರು.
ಅರ್ಜಿ ಸಲ್ಲಿಸುವುದು ಹೇಗೆ.?
ರಾಜ್ಯದಲ್ಲಿನ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗಾಗಿ ಸೇವಾ ಸಿಂಧುವಿನ ಪ್ರತ್ಯೇಕ ವೆಬ್ ಸೈಟ್ https://sevasindhugs.karnataka.gov.in/about_kannada.html ಈ ಲಿಂಕ್ ನಲ್ಲಿ ಮೂಲಕ ಸಲ್ಲಿಸಬಹುದಾಗಿದೆ.
ಇದಲ್ಲದೇ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಸೆಂಟರ್ ಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ದಾಖಲೆ ಬೇಕು.?
ಗೃಹ ಲಕ್ಷ್ಮೀ ಯೋಜನೆಗೆ ಕುಟುಂಬದ ಯಜಮಾನಿ ಮಹಿಳೆಯು ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಹಾಗೂ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ನೀಡಬೇಕಿದೆ.