ಬೆಳಗಾವಿ- ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಲು ಅರ್ಜಿದಾರರಿಂದ ಹಣ ಪಡೆದ ಗ್ರಾಮ್ ಒನ್ ಒಡೆಯನಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಕ್ಕ ಪಾಠ ಕಲಿಸಿದ್ದು,ಅರ್ಜಿದಾರರಿಂದ ಹಣ ಪಡೆದ ದೂರುಗಳು ಬಂದಲ್ಲಿ ಯಾವುದೇ ಮುಲಾಜಿಲ್ಲದೇ ಗ್ರಾಮ್ ಒನ್ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವದು ಎಂದು ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ ಎಂದುಲಕ್ಷ್ಮೀ ಆರ್. ಹೆಬ್ಬಾಳಕರ್
ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ.ಇವರು ಖಡಕ್ ಸಂದೇಶ ರವಾನಿಸಿದ್ದಾರೆ.