ಎಲ್ಲ ವಿಕಲಚೇತನರಿಗೆ ವಾಹನ-ಸಚಿವೆ ಹೆಬ್ಬಾಳಕರ್..

ಬೆಳಗಾವಿ-ರಾಜ್ಯದಲ್ಲಿರುವ ಎಲ್ಲ ವಿಕಲಚೇತನರಿಗೆ ಅವರ ಅಗತ್ಯತೆ ಆಧರಿಸಿ ಒಂದು ಬಾರಿಗೆ ದ್ವಿಚಕ್ರ ವಾಹನ ನೀಡಲು ತೀರ್ಮಾನಿಸಲಾಗಿದೆ. ಆದ್ದರಿಂದ ಅರ್ಹ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಹೆಸ್ಕಾಂ ನಿರ್ಲಕ್ಷ್ಯ ದಿಂದ ವಿದ್ಯುತ್ ತಂತಿ ತಗುಲಿ ಮರಣ ಹೊಂದಿರುವವರಿಗೆ ಕೂಡಲೇ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಬಾಡಿಗೆ ಕಟ್ಟಡಗಳಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಸಾಧ್ಯವಿದ್ದಷ್ಟು ಶಾಲಾ ಆವರಣದಲ್ಲಿ ಅಂಗನವಾಡಿ ಕೇಂದ್ರ ನಿರ್ಮಿಸಲು ಆದ್ಯತೆ ನೀಡಬೇಕು. ಈ ರೀತಿ ಮಾಡುವುದರಿಂದ ಅಂಗನವಾಡಿ ಮಕ್ಕಳು ಮುಂದೆ ಅದೇ ಶಾಲೆಗೆ ಪ್ರವೇಶ ಪಡೆಯಲು ಅನುಕೂಲವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಗೃಹಲಕ್ಷ್ಮೀ ಯೋಜನೆ; ಫಲಾನುಭವಿಗಳ ನೋಂದಣಿಗೆ ಸೂಚನೆ:

ಗೃಹಲಕ್ಷ್ಮೀ ಯೋಜನೆಗೆ 17 ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಜುಲೈ 20 ರಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.
ನೋಂದಣಿ ಪ್ರಕ್ರಿಯೆ ಹಾಗೂ ನೋಂದಾಯಿತ ಫಲಾನುಭವಿಗಳ ಸಂಖ್ಯೆ ಮತ್ತಿತರ ವಿಷಯಗಳನ್ನು ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಹಶೀಲ್ದಾರರಿಗೆ ಸೂಚನೆ ನೀಡಿದರು.

ಸರಕಾರದ ಯೋಜನೆಯನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿಗಳನ್ನು ನೇಮಿಸಲಾಗಿದೆ.
ಗ್ರಾಮ ಪಂಚಾಯತಿ ಮಟ್ಟದಲ್ಲಿ ಗೃಹಲಕ್ಷ್ಮೀ ಯೋಜನೆ ಕುರಿತು ಪ್ರತಿದಿನ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *