Breaking News

ಪ್ರವಾಹ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಹೆಬ್ಬಾಳಕರ್

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕುವೆಂಪು ನಗರದಲ್ಲಿರುವ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ , ಲಕ್ಷ್ಮೀ ಪುತ್ರ ಮೃನಾಲ ಅವರು ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.

ಬೆಳಗಾವಿ ಜಿಲ್ಲೆಯ ಖಾನಾಪೂರ ಪ್ರದೇಶದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ,ನದಿ ತೀರದ ಗ್ರಾಮಗಳ ಸ್ಥಿತಿಗತಿಗಳ ಬಗ್ಗೆ,ಒಟ್ಟಾರೆ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಮತ್ತು ಕಾಳಜಿ ಕೇಂದ್ರಗಳ ಬಗ್ಗೆ ಡಿಸಿ ಅವರಿಂದ ಮಾಹಿತಿ ಪಡೆದ ಹೆಬ್ಬಾಳಕರ್ ಖಾನಾಪೂರದ ನದಿ ತೀರದ ಗ್ರಾಮಗಳ ಪ್ರವಾಹ ಪರಿಸ್ಥಿತಿ ಪರಶೀಲನೆ ಮಾಡಲು ತೆರಳಿದರು.

Check Also

ನಗರದ ಹೊರವಲಯದ ಮನೆಯಲ್ಲಿ ಕೊಳೆತ ಎರಡು ಶವ ಪತ್ತೆ….

ಅಥಣಿ- ಮನೆಯಲ್ಲಿಯೇ ಕೊಳೆತ ಸ್ಥಿತಿಯಲ್ಲಿ ದಂಪತಿಗಳ ಶವಗಳು ಪತ್ತೆಯಾಗಿವೆ.ಅಥಣಿ ಪಟ್ಟಣದ ಮದಭಾವಿ ರಸ್ತೆ ಚೌವ್ಹಾಣ್ ತೋಟದಲ್ಲಿ ಜೋಡಿ ಶವಗಳು ಪತ್ತೆಯಾಗಿವೆ. …

Leave a Reply

Your email address will not be published. Required fields are marked *