ಬೆಳಗಾವಿ-ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆ ವಿಚಾರವಾಗಿ
ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ. ಆಗಿದ್ದಾರೆ.ಇದು ಅಲ್ಲಿ,ಇಲ್ಲಿ,ಹಾದಿಬೀದಿಯಲ್ಲಿ ಚರ್ಚೆ ಮಾಡುವ ವಿಚಾರ ಅಲ್ಲ ಅಂದು ಕೀಡಿಕಾರಿದ್ದಾರೆ.
ಮಹಿಳಾ ಸಿಎಂ ಬಗ್ಗೆ ಕೋಡಿಮಠದ ಶ್ರೀಗಳ ಹೇಳಿಕೆ ವೈರಲ್ ಆಗಿರುವ ಬಗ್ಗೆ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,ಅದೇಲ್ಲ ನಗಣ್ಯ,
ಮುಡಾ ಹಗರಣ ಬಗ್ಗೆ ಸುಳ್ಳು ದಾಖಲೆ ಕೊಟ್ಟು ಬಿಜೆಪಿಯವರು ಏನೋ ಮಾಡುತ್ತಿದ್ದಾರೆ.
ಇಂತಹ ಸಂಧರ್ಭದಲ್ಲಿ ನಾವೇಲ್ಲ ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ ನಿಲ್ಲಬೇಕಿದೆ.ಇದೇಲ್ಲ ಬಾಲಿಷ ಅನಿಸುತ್ತದೆ.
ಈ ವಿಚಾರವಾಗಿ ನಾನು ಏನು ಮಾತನಾಡಲು ಬಯಸಲ್ಲ.ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳತ್ತೀನಿ ಎಂದರು.
ಪಕ್ಷದಲ್ಲಿ ಹೈಕಮಾಂಡ್, ಶಾಸಕಾಂಗ ಎಂದು ಇದೆ.
ಆದರೇ ಇಂತಹ ವಿಚಾರವನ್ನು ಅಲ್ಲಿ, ಇಲ್ಲಿ ಗಲ್ಲಿಯಲ್ಲಿ ಮಾತನಾಡುವ ವಿಚಾರ ಅಲ್ಲ.ಧೀಮಂತ ನಾಯಕತ್ವ ನಮ್ಮ ಪಕ್ಷದಕ್ಕೆ ಇದೆ.ಸಿಎಂ ಸಿದ್ದರಾಮಯ್ಯ ಜೊತೆಗೆ ಗಟ್ಟಿಯಾಗಿ ಇರ್ತಾರೆ.ಸಿದ್ದರಾಮಯ್ಯ ಎಲ್ಲಿಯವರೆಗೆ ಗಟ್ಟಿಯಾಗಿ ಇರ್ತಾರೆ ಅಲ್ಲಿಯವರೆಗೆ ಅವರೇ ಸಿಎಂ.ಅಲ್ಲಿ ಇಲ್ಲಿ ಗಲ್ಲಿ, ಹಾದಿ ಬೀದಿಯಲ್ಲಿ ಮಾತನಾಡುವ ವಿಷಯ ಅಲ್ಲ.ಸಿದ್ದರಾಮಯ್ಯ ಎಲ್ಲಿಯ ವರೆಗೆ ಇರ್ತಿನ ಅಂತಾರ ಅಲ್ಲಿಯವರೆಗೆ ನಮ್ಮ ಬೆಂಬಲ ಅವರಿಗೆ ಇದೆ.ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ರು.