ಬೆಳಗಾವಿ: ಗ್ರಾಮೀಣ ಕ್ಷೇತ್ರದ ಹೀರೆಬಾಗೇವಾಡಿ ಗ್ರಾಮದಲ್ಲಿರುವ ಸಿದ್ದನಭಾಂವಿ ಕೆರೆ ತುಂಬಿಸಲು ಜಲ ಸಂಪನ್ಮೂಲ ಇಲಾಖೆ ಮಂಜೂರಾತಿ ನೀಡಿದ್ದು 2 ದಿನದಲ್ಲಿ ಜನ ಸಂಪನ್ಮೂಲ ಸಚಿವ ಎಮ್ ಬಿ ಪಾಟೀಲರು ಸಿದ್ದನಭಾಂವಿ ಕೆರೆಗೆ ಭೇಟಿ ನೀಡಲಿದ್ದಾರೆಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಜಲ ಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಹೀರೆಬಾಗೇವಾಡಿ ಹಾಗೂ ಸುತ್ತಮುತ್ತಲಿನ 10ಕ್ಕೂ ಹೆಚ್ಚು ಗ್ರಾಮಗಳ ಜೀವನಾಡಿಯಾಗಿರುವ ಸಿದ್ದನಭಾಂವಿ ಕೆರೆಗೆ ಮಲಪ್ರಭಾ ನದಿಯಿಂದ ನೀರು ತುಂಬಿಸುವ ಯೋಜನೆಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿಕೊಳ್ಳಲಾಗಿತ್ತು ಇದಕ್ಕೆ ಸ್ಪಂದಿಸಿರುವ ಜಲ ಸಂಪನ್ಮೂಲ ಸಚಿವರು ಯೋಜನೆಗೆ ಮಂಜೂರಾತಿ ನೀಡಿದ್ದಾರೆ ಎರಡು ದಿನದಲ್ಲಿ ಸಿದ್ದನಭಾಂವಿ ಕೆರೆಗೆ ಭೇಟಿ ನೀಡಿ ಕೆರೆಯನ್ನು ಪರಿಶೀಲಿಸಿ ಹಿರೇಬಾಗೇವಾಡಿ ಭಾಗದ ಜನರಿಗೆ ಸಿಹಿ ಸುದ್ದಿ ನೀಡುವುದಾಗಿ ಜಲ ಸಂಪನ್ಮೂಲ ಸಚಿವ ಎಮ್ ಬಿ ಪಾಟೀಲರು ಹೇಳಿಕೊಂಡಿದ್ದಾರೆಂದು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿದ್ದನಭಾಂವಿ ಕರೆಯನ್ನು ತುಂಬಿಸುವಂತೆ ಹಿರೇಬಾಗೇವಾಡಿ ಹಾಗೂ ಸುತ್ತಮುತ್ತಲಿನ ಗ್ರಾಮದ ಜನ ಕಳೆದ 50 ವರ್ಷಗಳಿಂದ ಸರ್ಕಾರಗಳಿಗೆ ಮನವಿ ಸಲ್ಲಿಸಿ ಸುಸ್ತಾಗಿದ್ದರು ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆಯನ್ನು ಗಮನಿಸಿ ಸಿದ್ದನಭಾಂವಿ ಕೆರೆ ತುಂಬಿಸುವ ಸಂಕಲ್ಪ ಮಾಡಿದ್ದೆ ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಲ ಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿರುವುದರ ಫಲವಾಗಿ ಸಿದ್ದನಭಾಂವಿ ಕೆರೆ ತುಂಬುವ ಭಾಗ್ಯ ಒದಗಿ ಬಂದಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ ವ್ಯಕ್ತ ಪಡಿಸಿದ್ದಾರೆ.
ಕಳೆದ ಬಾರಿಯ ವಿಧಾನ ಸಭೆಯ ಚುನಾವಣೆಯಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ಮಲಪ್ರಭಾ ನದಿಯಿಂದ ಹಿರೇಬಾಗೇವಾಡಿ ಗ್ರಾಮಕ್ಕೆ ನೀರು ಹರಿಸಿ ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದೆ ಆದರೆ ಚುನಾವಣೆಯಲ್ಲಿ ತಾವು ಗೆಲ್ಲಲು ಸಾಧ್ಯವಾಗಲಿಲ್ಲ ಆದರೆ ತಮ್ಮ ಪಕ್ಷ ಅಧಿಕಾರಕ್ಕೆ ಬಂದಿತು ಈ ಭಾಗದ ಜನರ ಪ್ರಮುಖ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟು ಅದನ್ನು ಸಾಕಾರಗೊಳಿಸುವ ಸಂಕಲ್ಪಮಾಡಿದ್ದೆ ಸರ್ಕಾರ ಅದಕ್ಕೆ ಮನ್ನಣೆ ನೀಡಿರುವುದಕ್ಕೆ ಸರ್ಕಾರಕ್ಕೆ ಹಾಗೂ ಜಲ ಸಂಪನ್ಮೂಲ ಸಚಿವರಿಗೆ ಚಿರರುಣಿಯಾಗಿರುವುದಾಗಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Check Also
ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!
ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …