ಬೆಳಗಾವಿ-ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಲಕ್ಷ್ಮೀ ತಾಯಿ ಫೌಂಡೇಶನ್ ಸದ್ದಿಲ್ಲದೆ ಅನೇಕ ಸಮಾಜ ಸೇವಾಕಾರ್ಯಗಳನ್ನು ಮಾಡುತ್ತಿದೆ ಬೆಳಗಾವಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾದಾಗ ಟ್ಯಾಂಕರ್ ಮೂಲಕ ನೀರು ಪೂರೈಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಫೌಂಡೇಶನ್, ಈಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಹೈಟೆಕ್ ಸೌಲಭ್ಯಗಳನ್ನು ನೀಡಲು ಮುಂದಾಗಿದೆ
ಖಾಸಗಿ ಶಾಲೆಗಳ ಮಕ್ಕಳಿಗೆ ಸಿಗುವ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೂ ದೊರೆಯಬೇಕು ಎನ್ನುವ ಸಂಕಲ್ಪದೊಂದಿಗೆ ಸರ್ಕಾರಿ ಶಾಲೆಗಳತ್ತ ಗಮನ ಹರಿಸಿರುವ ಲಕ್ಷ್ಮೀ ಹೆಬ್ಬಾಳಕರ ತಮ್ಮ ಫೌಂಡೇಶನ್ ಮೂಲಕ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಸುಳೇಬಾಂವಿ ಗ್ರಾಮದ ಶಾಸಕರ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಪ್ರೋಜೆಕ್ಟರ್ ನೀಡುವ ಮೂಲಕ ಸಕಾರಿ ಶಾಲೆಗಳ ಮಕ್ಕಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ
ಸುಳೇಬಾಂವಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪ್ರಥಮ ಕೊಡುಗೆಯಾಗಿ ಪ್ರೋಜೆಕ್ಟರ್ ನೀಡಿ ಮಾತನಾಡಿದ ಅವರು ನಾನೂ ಕೂಡಾ ಸರ್ಕಾರಿ ಶಾಲೆಯಲ್ಲಿ ಓದಿದ್ದೇನೆ ಖಾಸಗಿ ಶಾಲೆಗಳಲ್ಲಿ ಶ್ರೀಮಂತರ ಮಕ್ಕಳಿಗೆ ಸಿಗುವ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೂ ಸಿಗಬೇಕು ಎನ್ನುವದು ನನ್ನ ಮಹಾದಾಸೆಯಾಗಿದೆ ಹಳ್ಳಿಯ ಮಕ್ಕಳು ಇಂದಿನ ಸ್ಪರ್ದಾತ್ಮಕ ದಿನಗಳಲ್ಲಿ ಅವರು ಕೂಡಾ ಗುಣಮಟ್ಟದ ಶಿಕ್ಷಣ ಪಡೆದು ಬೆಳೆಯಬೇಕು ಎನ್ನುವದು ನನ್ನ ಕನಸಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದರು
ಪ್ರಥಮವಾಗಿ ಸುಳೇಬಾಂವಿ ಗ್ರಾಮದ ಸರ್ಕಾರಿ ಶಾಲೆಗೆ ಪ್ರೋಜೆಕ್ಟರ್ ನೀಡಿದ್ದೇನೆ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಎರಡು ಸಾವಿರ ಲೀಟರ ಸಾಮಥ್ರ್ಯದ ಕುಡಿಯುವ ನೀರಿನ ಫಿಲ್ಟರ್ ಯುನಿಟ್‍ಗಳನ್ನು ಅಳವಡಿಸುವ ಸಂಕಲ್ಪ ಮಾಡಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳಕರ ತಮ್ಮ ಮುಂದಿನ ಸೇವಾ ಕಾರ್ಯವನ್ನು ಪ್ರಕಟಿಸಿದರು
ಬೆಳಗಾವಿ ತಾಲೂಕಾ ಪಂಚಾಯತಿ ಅದ್ಯಕ್ಷ ಶಂಕರಗೌಡಾ ಪಾಟೀಲ ಮಾತನಾಡಿ ಲಕ್ಷ್ಮೀ ಹೆಬ್ಬಾಳಕರ ಅವರು ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಜನರ ಸಮಸ್ಯೆಗಳನ್ನು ತಿಳಿದುಕೊಂಡು ಅದಕ್ಕೆ ಸ್ಪಂದಿಸುತ್ತಿದ್ದಾರೆ ಅವರಲ್ಲಿರುವ ಸಾಮಾಜಿಕ ಕಳಕಳಿ ಅಭಿವೃದ್ಧಿಯ ಇಚ್ಛಾಶಕ್ತಿ ಎಲ್ಲರಿಗೂ ಮಾದರಿಯಾಗಿದೆ.ಅವರು ಮಾಡುತ್ತಿರುವ ಸಾಮಾಜಿಕ ಸೇವೆಯಿಂದ ನಾನು ಪ್ರಭಾವಿತನಾಗಿ ಬೆಳಗಾವಿ ತಾಲೂಕಿನ ಅಭಿವೃದ್ಧಿಗೆ ಅವರ ನೇತ್ರತ್ವದಲ್ಲಿಯೇ ಮುಖ್ಯಮಂತ್ರಿಗಳ ಬಳಿ ನಿಯೋಗ ಕೊಂಡಯ್ಯಿದು ವಿಶೇಷ ಅನುದಾನ ತರುವ ಪ್ರಯತ್ನ ಮಾಡುತ್ತೇನೆ ಎಂದರು
ಜಿಲ್ಲಾ ಪಂಚಾಯತಿ ಸದಸ್ಯೆ ಲಕ್ಷ್ಮೀ ವಿಠ್ಠಲ ಪಾರ್ವತಿ, ಹಿರೇಬಾಗೆವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿಸಿ ಪಾಟೀಲ ತಾಪಂ ಸದಸ್ಯೆ ಬಸನಗೌಡಾ ಪಾಟೀಲ ಗ್ರಾಪಂ ಸದಸ್ಯರಾದ ಕವಿÀತಾ ಶಂಕರ ಬಡಿಗೇರ, ನಾನಪ್ಪ ಪಾರ್ವತಿ,ಇಸ್ಮಾಯಿಲ ತಿಗಡಿ,ಮಹೇಶ ಸುಗನೆನ್ನವರ,ವಿಠ್ಠಲ ಬಂಡಿಗನಿ,ದ್ಯಾಮಪ್ಪ ಒಂಟಿ,ಸಂಬಾಜಿ ಅಲೋಜಿ,ಸುರೇಶ ಕೇದನೂರಉಶಪ್ಪ ನಂದಿ ಸೇರಿದಂತೆ ಸುಳೇಬಾಂವಿ ಗ್ರಾಮದ ಹಿರಿಯರು ಉಪಸ್ಥಿತರಿದ್ದರು
Check Also
ರಮೇಶ್ ಕತ್ತಿ, ರಾಜೀನಾಮೆ ಪತ್ರದಲ್ಲಿ ಏನಿದೆ ಗೊತ್ತಾ…?
ಮಾನ್ಯ ಮುಖ್ಯ ಕಾರ್ಯನಿರ್ವಾಹಕರು ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.ಬೆಳಗಾವಿ ವಿಷಯ- ನನ್ನ ಅಧ್ಯಕ್ಷ ಸ್ಥಾನಕ್ಕೆ …