Breaking News

ಸಾಲಮನ್ನಾ ಮಾಡಿದ ಮುಖ್ಯಮಂತ್ರಿಗಳಿಗೆ ವಂದನೆ…ಅಭಿನಂದನೆ…!

ಮುಖ್ಯಮಂತ್ರಿ ಸಿದ್ಧರಾಮಯ್ಯ ರೈತರ ಸಾಲ ಮನ್ನಾ ಮಾಡಿತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಲಗಾ ಗ್ರಾಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ನೇತ್ರತ್ವದಲ್ಲಿ ಸಮಾವೇಶ ನಡೆಸಿ ಸಾಲ ಮನ್ನಾ ಮಾಡಿ ರೈತರ ಕೈ ಹಿಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅಭಿನಂಧಿಸಿದ ಅಪರೂಪದ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದ ಸಮಗ್ರ ವರದಿ ಇಲ್ಲಿದೆ ನೋಡಿ

ಹಲಗಾ ಗ್ರಾಮದ ಸುವರ್ಣ ಗಾರ್ಡನ್ ದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಿತು ಸಭೆಯಲ್ಲಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ನಾಯಕರು ಮತ್ತು ನೂರಾರು ಜನ ಕಾರ್ಯಕರ್ತರು ಭಾಗವಹಿಸಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಭೀಕರ ಬರಗಾಲದ ಸಂಧರ್ಭದಲ್ಲಿ ರೈತರ ಪರವಾಗಿ ದಿಟ್ಟ ನಿರ್ಧಾರ ಕೈಗೊಂಡು ರೈತರ ಕೈಹಿಡಿದಿರುವದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅಭಿನಂಧಿಸಿ ಕಾಂಗ್ರೆಸ್ ನಡೆ ಅನ್ನದಾತನ ಕಡೆ ಎನ್ನುವ ಸಂದೇಶವನ್ನು ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರು ನೀಡಿದರು

ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಮೂಲಕ ರಾಜ್ಯ ಸರ್ಕಾರ ರೈತರ ಸರ್ಕಾರ ಅನ್ನೋದನ್ನು ಸಾಭೀತು ಮಾಡಿದೆ ರಾಜ್ಯ ಸರ್ಕಾರ ಜನಸಾಮಾನ್ಯರ ಹಿತದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ಹೇಳುವ ಕಾರ್ಯವನ್ನು ಆರಂಭಿಸಬೇಕು ಎಂದು ವಿನಯ ನಾವಲಗಟ್ಟಿ ಕಾರ್ಯ ಕರ್ತರಲ್ಲಿ ಮನವಿ ಮಾಡಿಕೊಂಡರು

ಮಾಜಿ ಬುಡಾ ಅಧ್ಯಕ್ಷ ಯುವರಾಜ ಕದಂ ಮಾತನಾಡಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳಕರ ಅಧಿಕಾರ ಇಲ್ಲದಿದ್ದರೂ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಸರ್ಕಾರದಿಂದ ಮಂಜೂರು ಮಾಡಿಸಿ ಸ್ಥಳೀಯ ಶಾಸಕರನ್ನು ಮೀರಿಸಿ ಗ್ರಾಮೀಣ ಮತಕ್ಷೇತ್ರದಲ್ಲಿ ಅಪಾರ ಜನಮೆಚ್ಚುಗೆ ಗಳಿಸಿದ್ದಾರೆ ಮುಂಬರುವ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಗೆಲ್ಲಿಸಲು ಕ್ಷೇತ್ರದ ಕಾರ್ಯಕರ್ತರು ಇಂದಿನಿಂದಲೇ ಕಾರ್ಯ ಪ್ರವೃತ್ತರಾಗಬೇಕೆಂದರು

ತಾಲ್ಲೂಕು ಪಂಚಾಯತಿ ಅಧ್ಯಕ್ಷ ಶಂಕರಗೌಡ ಪಾಟೀಲ ಮಾತನಾಡಿ ಲಕ್ಷ್ಮೀ ಹೆಬ್ಬಾಳಕರ ಅವರು ಎರಡು ಬಾರಿ ಸೋಲು ಅನುಭವಿಸಿದರೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾರ್ಯಕರ್ತರನ್ನು ಮರೆಯಲಿಲ್ಲ ಸೋಲಿಗೆ ಹೆದರಲಿಲ್ಲ ಅಧಿಕಾರ ಇಲ್ಲದಿದ್ದರೂ ತಮ್ಮ ಸಂತ ದುಡ್ಡು ಖರ್ಚು ಮಾಡಿ ನಿರಂತರವಾಗಿ ಸಮಾಜ ಸೇವೆ ಮಾಡುತ್ತಿದ್ದು ಲಕ್ಷ್ಮೀ ಹೆಬ್ಬಾಳಕರ ಅವರಿಂದ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಸಾದ್ಯವಿದ್ದು ಅವರೇ ಗ್ರಾಮೀಣ ಕ್ಷೇತ್ರದ ಮುಂದಿನ ಶಾಸಕರಾಗುತ್ತಾರೆ ಎಂದು ಶಂಕರಗೌಡ ಪಾಟೀಲ ಭವಿಷ್ಯ ನುಡಿದರು
ಕಾರ್ಯಕ್ರಮದ ರೂವಾರಿ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ ಬೆಳಗಾವಿ ಜಿಲ್ಲೆ ಕಾಂಗ್ರೆಸ್ ಭದ್ರಕೋಟೆ ಒಂದು ಕಾಲದಲ್ಲಿ ಶಂಕರಾನಂದ ಅವರು ಭದ್ರಕೋಟೆಯ ಸರದಾರ ಆಗಿದ್ದರು ಕಾಂಗ್ರೆಸ್ ಹೈಕಮಾಂಡ್ ಸತೀಶ ಜಾರಕಿಹೊಳಿ ಅವರನ್ನು ಎಐಸಿಸಿ ಕಾರ್ಯದರ್ಶಿ ಯನ್ನಾಗಿ ನೇಮಿಸಿದ್ದು ನಮಗೆಲ್ಲರಿಗೂ ಹರ್ಷತಂದಿದೆ ಸತೀಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಬೆಳಗಾವಿ ಜಿಲ್ಲೆ ಮತ್ತೇ ಕಾಂಗ್ರೆಸ್ ಭದ್ರಕೋಟೆ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳಕರ ವಿಶ್ವಾಸ ವ್ಯೆಕ್ತಪಡಿಸಿದರು
ರೈತ ದೇಶದ ಬೆನ್ನಲಬು ಈ ಅನ್ನದಾತನಿಗೆ ಯಾವ ಪಕ್ಷವೂ ಇಲ್ಲ ಯಾವ ಜಾತಿಯೂ ಇಲ್ಲ ಎಲ್ಲರ ಬದುಕಿಗೆ ಶ್ರಮ ಪಡುವ ಅನ್ನದಾತನ ಹೆಸರಿನಲ್ಲಿ ಬಿಜೆಪಿ ನಾಯಕರು ರಾಜಕಾರಣ ಮಾಡುವದನ್ನು ಬಿಟ್ಟು ರೈತರ ಸಾಲಮನ್ನಾ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅಭಿನಂದಿಸುವ ಕೆಲಸವನ್ನು ವಿರೋಧ ಪಕ್ಷದ ನಾಯಕರು ಮಾಡಲಿ ಎಂದು ಲಕ್ಷ್ಮೀ ಹೆಬ್ಬಾಳಕರ ಕಿವಿಮಾತು ಹೇಳಿದರು

ಒಟ್ಟಾರೆ ಹಲಗಾ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅಭಿನಂಧಿಸುವದರ ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಗೆಲ್ಲಿಸುವ ಸಂಕಲ್ಪವನ್ನು ಸಮಾವೇಶದಲ್ಲಿ ಮಾಡಲಾಯಿತು

ಜಿಲ್ಲಾಪಂಚಾಯತಿ ಸದಸ್ಯ ಶಂಕರಗೌಡ ಪಾಟೀಲ ಸಿಸಿ ಪಾಟೀಲ ನಾನಪ್ಪ ಪಾರ್ವತಿ,ತೌಸಿಪ್ ಫನಿಭಂಧ,ಅಡಿವೇಶ ಇಟಗಿ ಮಹಾಂತೇಶ ಉಳ್ಳಾಗಡ್ಡಿ ,ನೀಲೇಶ ಚಂದಗಡಕರ,ಶ್ರೀಮಂತಗೌಡ ಪಾಟೀಲ,ಅಶೋಕ ಐನಾವರ,ಸೇರಿದಂತೆ ಹಲವಾರು ಜನ ಕಾಂಗ್ರೆಸ್ ಮುಖಂಡರು ಮತ್ತು ನೂರಾರು ಜನ ಕಾರ್ಯಕರ್ತರು ಭಾಗವಹಿಸಿದ್ದರು

Check Also

ಎರಡು ಗ್ರಾಮಗಳಿಗೆ ದೀಪಾವಳಿ ಗೀಫ್ಟ್ ಕೊಟ್ಟ ಸಾಹುಕಾರ್….!!

ತಿಗಡಿ ಮತ್ತು ಅವರಾದಿ ಗ್ರಾಮಗಳಿಗೆ ದಸರಾ ಹಬ್ಬದ ಗಿಫ್ಟ್ ಕೊಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಗಡಿ, ಅವರಾದಿಗೆ ಪದವಿ ಪೂರ್ವ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.