ಬೆಳಗಾವಿ-ಭಾನುವಾರ ಬೆಳಗಾವಿಗೆ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್; ಭರ್ಜರಿ ಸ್ವಾಗತಕ್ಕೆ ಬೆಳಗಾವಿ ಸಜ್ಜಾಗಿದೆ.ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಸಚಿವರಾದ ನಂತರ ಮೊದಲ ಬಾರಿಗೆ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ.
ಒಟ್ಟಾಗಿ ಆಗಮಿಸುತ್ತಿರುವ ಸಚಿವ ದ್ವಯರನ್ನು ಸ್ವಾಗತಿಸಲು ಇಡೀ ಬೆಳಗಾವಿ ಮಹಾನಗರ ಸಜ್ಜಾಗಿದ್ದು, ನಗರದಲ್ಲಿ ಮೆರವಣಿಗೆ ನಡೆಯಲಿದೆ.
ಮೇ 20ರಂದು ಸತೀಶ್ ಜಾರಕಿಹೊಳಿ ಹಾಗೂ ಮೇ 27ರಂದು ಲಕ್ಷ್ಮೀ ಹೆಬ್ಬಾಳಕರ್ ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಬ್ಬರೂ ಈ ಸರಕಾರದ ಸಚಿವರಾದ ನಂತರ ಮೊದಲಬಾರಿಗೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಭಾನುವಾರ ಬೆಳಗ್ಗೆ 10.30ಕ್ಕೆ ಇಬ್ಬರೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ಇಬ್ಬರೂ ಸಚಿವರನ್ನು ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಲಿರುವ ಸಚಿವ ದ್ವಯರು ಅಲ್ಲಿ ಸಭೆ ನಡೆಸಲಿದ್ದಾರೆ. ನಂತರ ನಗರದಲ್ಲಿ ಮೆರವಣಿಗೆ ಮೂಲಕ ಕಿತ್ತೂರು ರಾಣಿ ಚನ್ನಮ್ಮ, ಛತ್ರಪತಿ ಶಿವಾಜಿ ಮಹಾರಾಜ, ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ ಸೇರಿದಂತೆ ಮಹಾನ್ ವ್ಯಕ್ತಿಗಳ ಪುತ್ಥಳಿಗಳಿಗೆ ಸಚಿವರು ಮಾಲಾರ್ಪಣೆ ಮಾಡಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ