Home / Breaking News / ಮೇ ತಿಂಗಳ ರೇಷನ್ ಬಿಡುಗಡೆ

ಮೇ ತಿಂಗಳ ರೇಷನ್ ಬಿಡುಗಡೆ

ಬೆಳಗಾವಿ, ಮೇ 5(ಕರ್ನಾಟಕ ವಾರ್ತೆ):ಕೋವಿಡ್ 19 ಎರಡನೇ ಅಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮತ್ತು  ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನುಸಾರ ಸಾರ್ವಜನಿಕ ವಿತರಣಾ ಪದ್ಧತಿಯಡಿ 2021ರ ಮೇ ಮಾಹೆಯ ಧಾನ್ಯಗಳನ್ನು ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಡಳಿತ ಮತ್ತು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಕೋರೋನಾ ರೋಗಾಣು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಂತ್ಯೊದಯ ಪಡಿತರ ಚೀಟಿ(NFSA)ದಾರರಿಗೆ ಅಕ್ಕಿ 35 ಕೆಜಿ, (PMGKAY) ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು.

ಬಿಪಿಎಲ್(ಆದ್ಯತಾ) ಪಡಿತರ ಚೀಟಿ(NFSA)ದಾರರಿಗೆ ಪ್ರತಿ ಸದಸ್ಯರಿಗೆ 5 ಕೆಜಿ, (PMGKAY) ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ, (NFSA) ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋದಿ.

ಎಪಿಎಲ್ ಪಡಿತರ ಚೀಟಿ ಆದ್ಯೇತರ ಒಪ್ಪಿಗೆ ನೀಡಿದ ಪಡಿತರ ಚೀಟಿಗೆ ಏಕ ಸದಸ್ಯನಿಗೆ 5 ಕೆಜಿ ಅಕ್ಕಿ, 2 ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆಜಿ ಅಕ್ಕಿ ಪ್ರತಿ ಕೆಜಿ ಗೆ 15 ರೂ. ಯಂತೆ ನೀಡಲಾಗುವುದು.

ಅಂತರರಾಜ್ಯ/ಅಂತರ ಜಿಲ್ಲೆ ಪೋರ್ಟೆಬಿಲಿಟಿ ಜಾರಿ ಇರುವುದರಿಂದ ಯಾವುದೇ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ  ಎಂದು ಆಹಾರ, ನಾಗರಿಕ ಸರಬರಾಜು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ವಸ್ತುಗಳನ್ನು ಪಡೆಯುವುದು ಕಡ್ಡಾಯವಾಗಿದೆ.

Check Also

52 ದಿನಗಳ ಬೀಗಕ್ಕೆ ಬ್ರೆಕ್,ಬೆಳಗಾವಿ ಇಂದಿನಿಂದ ಖುಲ್ಲಂ ಖುಲ್ಲಾ…!!!

ಬೆಳಗಾವಿ- ಬೆಳಗಾವಿ ಜಿಲ್ಲೆ ಕೊರೋನಾ ಮಹಾಮಾರಿಯ ಕಾಟಕ್ಕೆ ತತ್ತರಿಸಿತ್ತು,ಜಿಲ್ಲೆಯ ಜನ ಬರೊಬ್ಬರಿ 52 ದಿನಗಳ ಅನುಭವಿಸಿದ ಮನೆವಾಸದಿಂದ ಇಂದು ಮುಕ್ತಿ …

Leave a Reply

Your email address will not be published. Required fields are marked *