ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಜಪತಿ ಗ್ರಾಮದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ಈರಣ್ಣ ಮತ್ತಿಕಟ್ಟಿ ಅವರು ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು
ಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರ ನೀಡಿದ 165 ಆಶ್ವಾಸನೆ ಗಳಲ್ಲಿ ಶೇ 99 ರಷ್ಟು ಭರವಸೆಗಳನ್ನು ಈಡೇರಿಸಿದೆ ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಬರಗಾಲವಿದ್ದರೂ ಸರ್ಕಾರ ಅನ್ನ ಭಾಗ್ಯ ಕ್ಷೀರ ಭಾಗ್ಯ ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸಿದೆ ರಾಜ್ಯ ಅಭಿವೃದ್ಧಿ ಕಂಡಿದೆ ರೈತರ ಸಾಲ ಮನ್ನಾ ಮಾಡುವ ಮೂಲಕ ಸಿದ್ರಾಮಯ್ಯ ಸರ್ಕಾರ ಸರ್ವಜನಾಂಗದ ಸರ್ಕಾರ ಎಂದು ಜನ ಮೆಚ್ಚುಗೆ ಪಡೆದಿದೆ ಎಂದು ಮತ್ತೀಕಟ್ಟಿ ಹೇಳಿದರು
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ ರಾಜ್ಯಸರ್ಕಾರ ನಾಲ್ಕು ವರ್ಷದಲ್ಲಿ ಅಪ್ರತಿಮ ಸಾಧನೆ ಮಾಡಿದೆ ರಾಜ್ಯದ ಜನರಿಗೆ ಮಾಡಿದ ವಾಗ್ದಾನವನ್ನು ಹೆಮ್ಮೆಯಿಂದ ಪೂರೈಸಿದೆ ಚುನಾವಣೆಯ ಸಂಧರ್ಭದಲ್ಲಿ ಜನರಿಗೆ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದೆ ಸರ್ಕಾರದ ಯೋಜನೆಗಳ ಲಾಭ ರಾಜ್ಯದ ಜನರ ಮನೆ ಮನೆಗೆ ತಲುಪಿಸುವ ಕಾರ್ಯ ಸರ್ಕಾರ ಮಾಡಿದೆ ಎಂದು ಹೇಳಿದರು
ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನ ಇವತ್ತಿಗೂ ಕುಡಿಯುವ ನೀರಿನ ವ್ಯೆವಸ್ಥೆ ಮಾಡಿಸಿ ಕೊಡಿ ರಸ್ತೆ ದುರಸ್ಥಿ ಮಾಡಿಸಿ ಕೊಡಿ ಎಂದು ಕೇಳುತ್ತಿದ್ದಾರೆ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಮಾಡುವದರಲ್ಲಿ ಸ್ಥಳೀಯ ಶಾಸಕರು ಮತ್ತು ಸಂಸದರು ವಿಫಲವಾಗಿದ್ದಾರೆ ನನಗೆ ಶಾಸನ ಭದ್ಧವಾದ ಅಧಿಕಾರ ಇಲ್ಲದಿದ್ದರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮಂಜೂರು ಮಾಡಿಸಿದ್ದೇನೆ ಒಂದು ಬಾರಿ ಸೇವೆ ಮಾಡುವ ಶಾಸನಬದ್ಧವಾದ ಅಧಿಕಾರ ಕೊಟ್ಟರೆ ಗ್ರಾಮೀಣ ಕ್ಷೇತ್ರದ ಧ್ವನಿಯನ್ನು ಬೆಂಗಳೂರಿಗೆ ಮುಟ್ಟಿಸಿ ಈ ಕ್ಷೇತ್ರದ ಮಗಳಾಗಿ ಸೇವೆ ಮಾಡುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ ಭರವಸೆ ನೀಡಿದರು
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಪಿ ಮೋಹನ್ ಮಾತನಾಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಪಕ್ಷದ ಜೀವ ಅವರೇ ಶಕ್ತಿ ಈ ಶಕ್ತಿ ಇನ್ನಷ್ಡು ಕ್ರಿಯಾಶೀಲರಾಗಿ ರಾಜ್ಯದಲ್ಲಿ ಮುಂದಿನ ಬಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಪಣತೊಡಬೇಕು ಬೆಳಗಾವಿ ಜಿಲ್ಲೆ ಕ್ರಾಂತಿಯ ನೆಲ ಇದು ಪುಣ್ಯ ಭೂಮಿ ಇದೇ ಭೂಮಿಯಿಂದ ಪಕ್ಷ ಸಂಘಟನೆಯ ಕ್ರಾಂತಿ ಆರಂಭವಾಗಬೇಕು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿರುವ ಎಲ್ಲ ಜನಪರ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸುವ ಸಂಕಲ್ಪ ಮಾಡಬೇಕೆಂದರು
ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ ರಾಜ್ಯ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಕೊಟ್ಟ ಭರವಸೆಗಳನ್ನು ಈಡೇರಿಸಿದೆ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಿಳಿಸಲು ಕಾಂಗ್ರೆಸ್ ಪಕ್ಷ ಮನೆ ಮನೆಗೆ ಕಾಂಗ್ರೆಸ್ ಎನ್ನುವ ವಿನೂತನ ಕಾರ್ಯಕ್ರಮ ನಡೆಸುತ್ತಿದೆ ಎಂದರು
ಬೆಳಗಾವಿ ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ ಮಾತನಾಡಿ ಬಿಜೆಪಿ ಜಾತಿಯ ವಿಷ ಬೀಜ ಬಿತ್ತಿ ಕೋಮುವಾದಕ್ಕೆ ಕುಮ್ಮಕ್ಕು ನೀಡುತ್ತಿದೆ ಕಾಂಗ್ರೆಸ್ ಪಕ್ಷ ಸರ್ವಜನಾಂಗದ ಪಕ್ಷವಾಗಿದ್ದು ಪಕ್ಷ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಿದೆ ಎಂದರು
ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಗಜಪತಿ ಗ್ರಾಮದ ಮನೆ ಮನೆಗೆ ತೆರಳಿ ಸರ್ಕಾರದ ಸಾಧನೆಗಳ ಕೈಪಿಡಿ ಹಂಚಿ ಸ್ಟೀಕರ್ ಅಂಟಿಸಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಸಲಾಯಿತು
ಸಿಸಿ.ಪಾಟೀಲ ನಿಂಗನಗೌಡ ಪಾಟೀಲ ಬಸವರಾಜ ಅಲಾಬಾದಿ.ಯುವರಾಜ ಕದಂ.ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ ಸೇರಿದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು