Breaking News

ಅವರೇ ಸಾಹುಕಾರ್ ಅಲ್ವಾ, ನಾನು ಹೆಸರಿಗಷ್ಟೇ ಲಕ್ಷ್ಮೀ

ಬೆಳಗಾವಿ- ದುಡ್ಡು ನನ್ನ ಹತ್ತಿರ ಎಲ್ಲಿದೆರ್ರೀ ನೀವೇ ಅವರಿಗೆ ಸಾಹುಕಾರ್ ಅಂತೀರಾ ನಾನು ಹೆಸರಿಗಷ್ಟೇ ಲಕ್ಷ್ಮೀ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಮುಗಿದ ಬಳಿಕ ಬೆಳಗಾವಿಯಲ್ಲಿ ಮೊದಲ ಬಾರಿಗೆ ಮಾದ್ಯಮಗಳ ಜೊತೆ ಮಾತನಾಡಿದ ಅವರು ಲೋಕಸಭೆ ಚುನಾವಣೆಯಲ್ಲಿ ಸೋಲಾಗಿದೆ.ಯಾವ ಕಾರಣಕ್ಕೆ ಸೋಲಾಗಿದೆ ಎಂದು ತಿಳಿದುಕೊಳ್ಳುತ್ತಿದ್ದೇನೆ.ಸೋಲು ಮತ್ತು ಗೆಲುವು ಎರಡನ್ನೂ ನಾನು ಸಮಾನವಾಗಿ ಸ್ವೀಕರಿಸಿದ್ದೇನೆ. ಹಿಂದೆ ನಡೆದ ಎಂಎಲ್ಸಿ ಚುನಾವಣೆಯಲ್ಲಿ ನನ್ನ ಸಹೋದರನನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಪ್ರಯತ್ನ ಮಾಡಿದ್ದರು ನನ್ನ ಕ್ಷೇತ್ರದ ಜನ ನನ್ನನ್ನು ಗೆಲ್ಲಿಸಿದ್ರು ಈಗ ನನ್ನ ಮಗ ಸೋತಿದ್ದಾನೆ ಎಲ್ಲಿ ಸೋಲಾಗಿದೆಯೋ ಅಲ್ಲಿಯೇ ಗೆಲ್ಲಬೇಕು ಎನ್ನುವದು ನನ್ನ ಮಗನ ಮನಸ್ಸಿನಲ್ಲೂ ಇದೆ. ಅದಕ್ಕಾಗಿ ಸಂಘಟನೆ ಮಾಡುತ್ತಿದ್ದೇನೆ ಓಡಾಡುತ್ತಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಅವರು ಕಳೆದ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಗೆದ್ರೆ ನಾನೇ ಹಾರ ಹಾಕ್ತೀನಿ ಅಂದಿದ್ರು ಆದ್ರೆ ಆ ಹಾರ ಎಲ್ಲಿದೆ ? ಅವರ ಸಂಸ್ಕೃತಿ ಎಂತಹದ್ದು ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ ರಾಜ್ಯದ ಜನ ಅದಕ್ಕೆ ಉತ್ತರ ಕೊಡ್ತಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ರು.

ರಾಜ್ಯದ ಮುಖ್ಯಂತ್ರಿಯಾಗಿ ಸಿಎಂ ಸಿದ್ರಾಮಯ್ಯ ಒಳ್ಳೆಯ ಆಡಳಿತ ನಡೆಸಿದ್ದಾರೆ. ನುಡಿದಂತೆ ನಡೆದಿದ್ದಾರೆ. ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರ ಅಭಿಪ್ರಾಯ ಪಡೆದುಕೊಂಡು ಹೈಕಮಾಂಡ್ ಅವರನ್ನು ಸಿಎಂ ಮಾಡಿದೆ.ಕೋವೀಡ್ ಸಂಧರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯದಲ್ಲಿ ಓಡಾಡಿ ಸೇವೆ ಮಾಡಿದ್ದಾರೆ. ಸಿದ್ರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು ಇದ್ದಂತೆ ಏನೇ ಆದ್ರೂ ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

Check Also

ಕುಡಚಿ ರೈಲು ನಿಲ್ದಾಣದಲ್ಲಿ ʻವಂದೇ ಭಾರತ ರೈಲುʼ ನಿಲುಗಡೆಗೆ ಸಂಸದೆ ಪ್ರಿಯಾಂಕಾ ಮನವಿ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲನ್ನು (ನಂ.20669) ನಿಲುಗಡೆ ಮಾಡಬೇಕೆಂದು ಕೇಂದ್ರ …

Leave a Reply

Your email address will not be published. Required fields are marked *