Breaking News

ಗೌರಿ ಲಂಕೇಶ ಹತ್ಯೆ ಪ್ರಕರಣ ಸಿಬಿಐ ಗೆ ಒಪ್ಪಿಸಿ- ಹೆಬ್ಬಾಳಕರ

ಬೆಳಗಾವಿ-

ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಖಂಡಿಸಿ.. ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದಿಂದ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮೇಣದ ಬತ್ತಿ ಹಚ್ಚಿ ಗೌರಿ ಲಂಕೇಶ ಅವರಿಗೆ ಶೃದ್ಧಾಂಜಲಿ ಅರ್ಪಿಸುವದರ ಜೊತೆಗೆ ಹಂತಕರನ್ನು ಬಂಧಿಸುವಂತೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು

ಕರ್ನಾಟಕದಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ. ಎರಡು ವರ್ಷಗಳ ಹಿಂದೆ ಎಂ.ಎಂ.ಕಲಬುರಗಿ ಹತ್ಯೆಯಾಗಿತ್ತು. ಈಗ ಗೌರಿ ಲಂಕೇಶಯವರ ಹತ್ಯೆ ಮಾಡಲಾಗಿದೆ.
ಈ ಮೂಲಕ ಪ್ರಗತಿಪರ ಚಿಂತನೆಗಳನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಹಾಗಾಗಿ, ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು. ತಪ್ಪಿಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು
ಹೆಬ್ಬಾಳ್ಕರ್ ಒತ್ತಾಯಿಸಿದರು
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಅನೇಕ ಭಾಷೆಗಳನ್ನಾಡುವ ಅನೇಕ ವರ್ಗಗಳ ಜನರಿದ್ದಾರೆ ವಿವಿಧತೆಯಲ್ಲಿ ಏಕತೆ ಸಾರುವ ಭಾರತದಲ್ಲಿ ಮತೀಯ ಶಕ್ತಿಗಳು ಪ್ರಗತಿಪರ ವಿಚಾರಧಾರೆ ಹೊಂದಿರುವ ಬುದ್ಧಿ ಜೀವಿಗಳನ್ನು ಹತ್ಯೆ ಮಾಡುವ ಮೂಲಕ ದೇಶದ ಏಕತೆಗೆ ಧಕ್ಕೆ ತರುವ ಪ್ರಯತ್ನ ನಡೆದಿದ್ದು ಕಲ್ಬುರ್ಗಿ ಮತ್ತು ಗೌರಿ ಲಂಕೇಶ ಅವರ ಹಂತಕರ ಪತ್ತೆಗೆ ಸರ್ಕಾರ ವಿಶೇಷ ತಂಡ ರಚಿಸಿದೆ, ತನಿಖೆ ಬೇಗನೆ ಪೂರ್ಣಗೊಳಿಸಿ ಹಂತಕರಿಗೆ ಕಠಿಣ ಶಿಕ್ಷೆ ನೀಡಬೇಕು ಅಗತ್ಯ ಬಿದ್ದಲ್ಲಿ ಸರ್ಕಾರ ಗೌರಿ ಲಂಕೇಶ ಹತ್ಯೆ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಬೇಕು ಎಂದು ಹೆಬ್ಬಾಳಕರ ಒತ್ತಾಯ ಮಾಡಿದರು

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *