Breaking News

ಆರೋಪದಲ್ಲಿ ಸತ್ಯಾಂಶ ಇಲ್ಲ,-ಮಲ್ಲಮ್ಮನ ಬೆಳವಡಿ ,ಪಿಡಿಓ ಸ್ಪಷ್ಟನೆ

ಬೆಳಗಾವಿ-ಬೆಳವಡಿ ಗ್ರಾಮದ ಗ್ರಾಮಲೆಕ್ಕಾಧಿಕಾರಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವದಾಗಿ ಕೆಲವು ಮಾದ್ಯಮಗಳಲ್ಲಿ ಪ್ರಕಟವಾಗಿದ್ದು ಈ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಬೆಳವಡಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಸ್ಪಷ್ಟೀಕರಣ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಸ್ಪಷ್ಟನೆ ಹೊರಡಿಸಿರುವ ಅವರುಇಂದು ಸೆಪ್ಟೆಂಬರ್ 3 ರಂದು ಕೆಲವು ಮಾದ್ಯಮಗಳಲ್ಲಿ ಪಿಡಿಓ ವಿರುದ್ಧ ಕ್ರಮಕ್ಕೆ ಆಗ್ರಹ ಎನ್ನುವ ಶಿರ್ಷಿಕೆಯಲ್ಲಿ ಸುದ್ಧಿ ಪ್ರಕಟವಾಗಿದ್ದು ಇದರಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ. ಆದರೆ ಈ ಆರೋಪ ಸತ್ಯತೆಯಿಂದ ಕೂಡಿರುವದಿಲ್ಲ.ದುರುದ್ದೇಶದಿಂದ ಆರೋಪ ಮಾಡಿದ್ದಾರೆ.ಎಂದು ಬೆಳವಡಿ ಗ್ರಾ ಪಂ ಪಿಡಿಓ ಆರೋಪವನ್ನು ತಳ್ಳಿ ಹಾಕಿದ್ದಾರೆ.

ನಾನೊಬ್ಬ ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಯಾಗಿ,ನನ್ನ ವ್ಯೆಕ್ತಿ ಗೌರವ ಮರೆತು ಅವಾಚ್ಯ ಶಬ್ದಗಳಿಂದ ಯಾರಿಗೂ ನಿಂದನೆ ಮಾಡಿಲ್ಲ.ಎಂದು ಬೆಳವಡಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *