ಮಂಗಳೂರು-
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಪರಿಸ್ಥಿತಿ ನಿಗಿ ನಿಗಿ ಕೆಂಡದಂತಾಗಿದ್ದು ಇದರ ಮಧ್ಯೆ ಸುರತ್ಕಲ್ ನಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ ನಡೆದಿದೆ.
ಸುರತ್ಕಲ್ ನ ಎಸ್ ಕೆ ಮೊಬೈಲ್ ಅಂಗಡಿ ಬಳಿ ಘಟನೆ ನಡೆದಿದೆ. ಮೂವರು ಯುವಕರ ತಂಡ ಫಾಜಿಲ್ ಮಂಗಳಪೇಟೆ ಎಂಬಾತನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಫಾಜಿಲ್ ನನ್ನು ಸ್ಥಳೀಯರು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸೂರತ್ಕಲ್ ನಲ್ಲಿ ಬಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ