ಬೆಳಗಾವಿ-ನಾವಗೆ ಅಗ್ನಿದುರಂತದಲ್ಲಿ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ 18 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಕಾರ್ಖಾನೆ ಅತ್ಯಧಿಕ ಪರಿಹಾರ ನೀಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರ ಮದ್ಯಸ್ಥಿಕೆಯಿಂದಾಗಿ ಕಾರ್ಖಾನೆಯ ಮಾಲೀಕ ಮೃತ ಕಾರ್ಮಿಕನ ಕುಟುಂಬಕ್ಕೆ ಬರೊಬ್ವರಿ 18 ಲಕ್ಷ ರೂ ಪರಿಹಾರ ನೀಡಿದ್ದಾರೆ.ಕಾರ್ಖಾನೆ ಸುಟ್ಟು ಭಸ್ಮವಾಗಿ ಕಾರ್ಖಾನೆ ಮಾಲೀಕನಿಗೆ ಕೋಟಿ,ಕೋಟಿ ನಷ್ಟವಾಗಿದ್ದರೂ ಸಹ ಕಾರ್ಖಾನೆಯ ಮಾಲೀಕ ಕಾರ್ಖಾನೆಯ ಎಲ್ಲ ಕಾರ್ಮಿಕರಿಗೆ ಪ್ರಸಕ್ತ ತಿಂಗಳ ವೇತನವನ್ನೂ ಕಾರ್ಮಿಕರ ಖಾತೆಗೆ ಜಮಾ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ತಾಲ್ಲೂಕಿನ ನಾವಗೆ ಗ್ರಾಮದಲ್ಲಿರುವ ಸ್ನೇಹಂ ಟೇಪಿಂಗ್ ಸಲ್ಯೂಷನ್ಸ್ ಪ್ರೈ.ಲಿ. ಕಾರ್ಖಾನೆಯಲ್ಲಿ ಇತ್ತೀಚೆಗೆ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ಕಾರ್ಖಾನೆಯು 18 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಿದೆ.
ದುರಂತದಲ್ಲಿ ಮೃತಪಟ್ಟಿರುವ ಯಲ್ಲಗೌಡ ಸಣ್ಣ ಯಲ್ಲಪ್ಪ ಗೌಂಡ್ಯಾಗೋಳ ಇವರ ತಂದೆ ಹಾಗೂ ತಾಯಿಯ ಹೆಸರಿನಲ್ಲಿ ತಲಾ 9 ಲಕ್ಷ ರೂಪಾಯಿ ಮೊತ್ತದ ಚೆಕ್‌ಗಳನ್ನು ಕಾರ್ಖಾನೆಯು ನೀಡಿರುತ್ತದೆ.
ಮೃತ ಕಾರ್ಮಿಕನ ಕುಟುಂಬಕ್ಕೆ ನಾಳೆ ಚೆಕ್ ನೀಡಲಾಗುವುದು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					