ನಿರಾಶ್ರಿತರ ಕೇಂದ್ರ ನಿರ್ಮಾಣ ಕಾಮಗಾರಿ ಪರಿಶೀಲನೆ,
ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣ: ಎಂ.ಜಿ.ಹಿರೇಮಠ

ಬೆಳಗಾವಿ, ಜೂ.13(ಕರ್ನಾಟಕ ವಾರ್ತೆ): ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ ವತಿಯಿಂದ ನಗರದ ಮಚ್ಛೆ ಬಳಿ ನಿರ್ಮಿಸಲಾಗುತ್ತಿರುವ ನಿರಾಶ್ರಿತರ ಕೇಂದ್ರದ ಕಾಮಗಾರಿಯನ್ನು ಕೆಆರ್ ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಜಿ.ಹಿರೇಮಠ ಅವರು ಪರಿಶೀಲಿಸಿದರು.
ನಿರಾಶ್ರಿತರ ಕೇಂದ್ರದ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹಿರೇಮಠ ಅವರು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಮಗಾರಿಯನ್ನು ಎರಡು ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಕೆಆರ್ ಐಡಿಎಲ್ ಸ್ಥಳೀಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
****
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ