Breaking News
Home / ಬೆಳಗಾವಿ ನಗರ / ಮುಂದಿನ ವಾರ ಕೇಂದ್ರಕ್ಕೆ ನಿಯೋಗ- ಕಾಗೋಡು ತಿಮ್ಮಪ್ಪ

ಮುಂದಿನ ವಾರ ಕೇಂದ್ರಕ್ಕೆ ನಿಯೋಗ- ಕಾಗೋಡು ತಿಮ್ಮಪ್ಪ

ಬೆಣಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಆರು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಮೇವಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಬರ ಪರಿಹಾರ ಕಾಮಗಾರಿಗಳಲ್ಲಿ ಮಂದ ಗತಿ ಸಲ್ಲದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಬೆಳಗಾವಿ ಜಿಲ್ಲೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು

ಜಿಲ್ಲಾಧಕಾರಿಗಳ ಕಚೇರಿಯಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ಆರು ತಾಲೂಕಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಇದನ್ನು ಹೊರತು ಪಡಿಸಿ ಬೇರೆ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮೇವಿನ ಸಮಸ್ಯೆ ಇದ್ದರೆ ಅದಕ್ಕೂ ಸ್ಪಂದಿಸಬೇಕು ಬೆಳೆ ಹಾನಿ ಕುರಿತು ಸರ್ವೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಕುಡಿಯುವ ನೀರಿನ ತೊಂದರೆ ಆಗದಂತೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ರೂಪಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು

ಈ ಸಂಧರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜಯರಾಂ ಬೆಳಗಾವಿ ಜಿಲ್ಲೆಯಲ್ಲಿ ಅಂತ್ಯಸಂಸ್ಜಾರದ ನಾಲ್ಕು ಕೋಟಿ ಅನುದಾನದ ಅವಶ್ಯಕತೆ ಇದ್ದು ಇದನ್ನು ಬೇಗನೆ ಬಿಡುಗಡೆ ಮಾಡಬೇಕು ಬೆಳಗಾವಿ ಜಿಲ್ಲೆ ಭೌಗೋಳಿಕವಾಗಿ ವಿಶಾಲವಾಗಿದ್ದು ಹೆಚ್ಚುವರಿ ಹೋಬಳಿಗಳನ್ನು ಮಂಜೂರು ಮಾಡಬೇಕೆಂದು ಸಚಿವರಲ್ಲಿ ಮನವಿ ಮಾಡಿಕೊಂಡರು

ಮುಂದಿನ ವಾರ ಕೇಂದ್ರಕ್ಕೆ ನಿಯೋಗ

ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದ್ದು ಹೆಚ್ಚಿನ ಅನುದಾನ ನೀಡುವಂತೆ ಕೋರಲು ಮುಂದಿನ ವಾರ ರಾಜ್ಯದಿಂದ ಕೇಂದ್ರಕ್ಕೆ ನಿಯೋಗ ಕೊಂಡಯ್ಯಲಾಗುವದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ

 

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *