ಬೆಳಗಾವಿ-ನಗರ ಸಭೆ ,ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರು ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರೀಕ್ಷೆಗೆ ವಿಶೇಷ ಜಾಗೃತ ದಳವನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಸನ್ಮಾನ ಸ್ವಿಕರಿಸಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಗ್ರಾಮ ಮಟ್ಟದಿಂದ ನಗರ ಪ್ರದೇಶಗಳಿಗೆ ವಲಸೆ ಬರುವದನ್ನು ತಡೆಯಲು ಮೂರನೇಯ ಹಾಗು ನಾಲ್ಕನೇಯ ನಗರೋಥ್ಥಾನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಆದಷ್ಟು ಬೇಗನೆ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ಪಡೆದು ಕಾಮಗಾರಿಗಳಿಗೆ ಚಾಲನೆ ನೀಡಿ ಎಲ್ಲ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ್ಲ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ದೊರಕಿಸಿ ಕೊಡುವ ಸಂಕಲ್ಪ ಮಾಡಲಾಗಿದೆ ಎಂದರು
ಪೌರ ಕಾರ್ಮಿಕರ ವೇತನ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು ಆದಷ್ಟು ಬೇಗನೆ ವೇತನ ಹೆಚ್ಚಳ ಮಾಡಿ ವೇತನವನ್ನು ನೇರವಾಗಿ ಕಾರ್ಮಿಕರ ಖಾತೆಗೆ ಜಮಾ ಮಾಡಲು ನಿರ್ಧರಿಸಲಾಗಿದೆ ಕೆಲು ಗುತ್ತಗೆದಾರರು ಫೇಕ್ ಅಕೌಂಟ್ ಗಳನ್ನ ಸೃಷ್ಠಿಸಿದ್ದಾರೆ ಎನ್ನುವ ವಿಷಯ ತಮ್ಮ ಗಮನಕ್ಕೆ ಬಂದಿದ್ದು ಈ ಕುರಿತುಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು
ಮೆಲ್ದರ್ಜೆಗೇರಿದ ಸ್ಥಳಿಯ ಸಂಸ್ಥೆಗಳಿಗೆ ನಿಯಮಾನುಸಾರ ಅನುದಾನ ಬಿಡುಗಡೆ ಮಾಡಲಾಗಿದೆ ಅವರಿಗೆ ಕಚೇರಿ ಕಟ್ಟಡ ಸೇರಿದಂತೆ ಇನ್ನುಳಿದ ಕಾಮಗಾರಿಗಳಿಗೆ ಅನುದಾನ ಅಗತ್ಯ ಬಿದ್ದರೆ ಅವರು ಕ್ರಿಯಾ ಯೋಜನೆ ರೂಪಿಸಿ ಪ್ರಸ್ತಾವಣೆ ಸಲ್ಲಿಸಿದರೆ ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ ಎಂದರು
ಈ ಸಂದರ್ಭದಲ್ಲಿ ವಿನಯ ನಾವಲಗಟ್ಟಿ ಶಾಸಕ ಗಣೇಶ ಹುಕ್ಕೇರಿ ಯುವರಾಜ ಕದಂ,ಮೋಹನ ರೆಡ್ಡಿ ರಾಜಾ ಸಲೀಂ ಖಾಶಿಮನವರ ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಬಸವರಾಜ ಶೇಗಾವಿ, ಅಪ್ಪಾಸಾಬ ದೇಸಾಯಿ,ಶೇಖರ ಈಟಿ,ಸುರೇಶ ತಳವಾರ ಮಲ್ಲೇಶ ರಮಚನ್ನವರ ಸೇರಿದಂತೆ ಮೀನಾಕ್ಷಿ ನೆಲಂಗಳೆ ಮೊದಲಾದವರು ಉಪಸ್ಥಿತರಿದ್ದರು.
ಕಿತ್ತೂರಿಗೆ ವಿಶೇಷ ಅನುದಾನ ಕೊಡಿ:
ಐತಿಹಾಸಿಕ ಚನ್ನಮ್ಮನ ಕಿತ್ತೂರು ಹಾಗು ಮುಗುಟಖಾನ ಹುಬ್ಬಳ್ಳಿ ಪಟ್ಟಣ ಪಂಚಾಯತಿಗಳಿಗೆ ವಿಶೇಷ ಅನುದಾನ ನೀಡುವಂತೆ ಕಾಂಗ್ರೆಸ್ ಮುಖಂಡ ರಾಜಾ ಸಳಿಂ ಖಾಶಿಮನವರ ಸಚಿವರಲ್ಲಿ ಮನವಿ ಮಾಡಿಕೊಂಡರು
Check Also
ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!
ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …