ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಮತ್ತು ಸಚಿವ ರಮೇಶ ಜಾರಕಿಹೊಳಿ ನಡುವಿನ ವಾಕ್ ಸಮರಕ್ಕೆ ಬ್ರೇಕ್ ಬಿದ್ದಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ,ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರ ಮದ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಫಲವಾಗಿದ್ದು ಇಬ್ಬರು ಸಹೋದರರು ಭಿನ್ನಾಭಿಪ್ರಾಯ ಬದಿಗೊತ್ತಿ ನಾಯಕರ ಸಮ್ಮುಖದಲ್ಲಿ ಕೈ ಕುಲಕುವ ಮೂಲಕ ತಂಟೆಗೆ ಇತಿ ಶ್ರೀ ಹಾಡಿದ್ದಾರೆ
ಬೆಂಗಳೂರಿನ ಕೆಪಿಸಿಸಿಕಚೇರಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಸಂಸದ ಪ್ರಕಾಶ ಹುಕ್ಕೇರಿ ಫಿರೋಜ್ ಸೇಠ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಲಕ್ಷ್ಮೀ ಹೆಬ್ಬಾಳಕರ ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರು ಭಾಗವಹಿಸಿದ್ದರು
ಕಾಂಗ್ರೆಸ್ ನಾಯಕರು ಆರಂಭದಲ್ಲಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಸ್ಥಿತಿ ಗತಿ ಯ ಬಗ್ಗೆ ಸಾಮೂಹಿಕ ಚರ್ಚೆ ಮಾಡಿದರು ಇದಾದ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ದಿನೇಶ ಗುಂಡೂರಾವ್ ಮತ್ತು ರಾಜ್ಯದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರು ಸತೀಶ ಜಾರಕಿಹೊಳಿ ಮತ್ತು ರಮೇಶ ಜಾರಕಿಹೊಳಿ ಅವರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿ ಇಬ್ಬರ ನಡುವಿನಲ್ಲ ಭಿನ್ನಾಭಿಪ್ರಾಯವನ್ನು ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ
ಸಂಧಾನ ಸಭೆ ಮುಗಿದ ಬಳಿಕ ಇಬ್ಬರು ಸಹೋದರರು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕೈ ಕುಲಕಿ ಒಂದಾಗಿದ್ದಾರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿ ಬೆಳಗಾವಿ ಜಿಲ್ಲೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದು ಈ ಜಲ್ಲೆಯ ನಾಯಕರು ಒಗ್ಗಟ್ಟಾಗಿ ಪಕ್ಷದ ಸಂಘಟನೆ ಮಾಡಬೇಕು ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಪಕ್ಷವನ್ನು ಬಲಿಷ್ಠಗೊಳಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ
ಜಾರಕಿಹಳಿ ಸಹೋದರರ ನಡುವಿನ ವಾಕ್ ಸಮರ ಈಗ ಸದ್ಯಕ್ಕೆ ಮುಗಿದಂತಾಗಿದ್ದು ಬೆಳಗಾವಿ ಜಿಲ್ಕೆಯ ಜಾರಕಿಹೊಳಿ ಅಭಿಮಾನಿಗಳಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ