ಬೆಳಗಾವಿ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಘಟಕದ ವತಿಯಿಂದ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಆ.13 ರಂದು ಬೆಳಗ್ಗೆ 11 ಗಂಟೆಗೆ ತಾಲೂಕಿನ ಹಿರೇಬಾಗೇವಾಡಿಯ ಶ್ರೀ ಫಡಿಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.
ಬಡೇಕೊಳ್ಳಮಠದ ನಾಗೇಂದ್ರ ಸ್ವಾಮೀಜಿಗಳು, ಮುತ್ನಾಳ ಕೇದಾರ ಶಾಖಾಪೀಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳು, ಹಿರೇಬಾಗೇವಾಡಿಯ ದರ್ಗಾ ಅಜ್ಜನವರು ಮತ್ತು ಹಿರೇಬಾಗೇವಾಡಿಯ ಕಲ್ಲಯ್ಯಾ ಸ್ವಾಮೀಗಳು ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಹಿರೇಬಾಗೇವಾಡಿ ಬ್ಲಾಕ್ ಅಧ್ಯಕ್ಷ ಸಿ.ಸಿ.ಪಾಟೀ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು.
ಶಾಸಕರಾದ ಸತೀಶ ಜಾರಕಿಹೊಳಿ, ಫಿರೋಜ್ ಸೇಠ್, ವಿಧಾನ ಪರಿಷತ್ ಸದಸ್ಯ ವಿವೇಕರಾವ ಪಾಟೀಲ, ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ, ಕಾಂಗ್ರೆಸ್ ಕಮಿಟಿಯ ಬೆಳಗಾವಿ ಜಿಲ್ಲಾ(ಗ್ರಾಮೀಣ) ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಸೇರಿದಂತೆ ಕಾಂಗ್ರೆಸ್ ಗಣ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ