ಬೆಳಗಾವಿ.
ನಗರದಲ್ಲಿ ಕಳೆದ ರಾತ್ರಿ ಸಂಭವಿಸಿದ ಗಲಾಟೆ ಕುರಿತು ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ಮುಗ್ಧರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಪೆÇಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಪ್ರವಾಸಿ ಮಂದಿರದಲ್ಲಿಂದು ಪೆÇಲೀಸ್ ಆಯುಕ್ತ ಟಿ.ಜಿ. ಕøಷ್ಣಭಟ್ ಮತ್ತು ಡಿಸಿಪಿ ಅಮರನಾಥ ರೆಡ್ಡಿ ಅವರಿಂದ ಘಟನೆಯ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಯಾರದೇ ಒತ್ತಡಕ್ಕೆ ಒಳಗಾಗಿ ಕಾರ್ಯ ಮಾಡದೇ ನಿಜವಾಗಿಯೂ ತಪ್ಪಿತಸ್ಥರನ್ನು ಬಿಡದೆ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದರು.
ಸಾರ್ವಜನಿಕರೂ ಕೂಡ ಯಾವುದೇ ಪರಿಸ್ಥಿತಿಯಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳದೇ ಶಾಂತಿ ಕಾಪಾಡಿಕೊಂಡು ಹೋಗುವಂತೆ ಅವರು ಮನವಿ ಮಾಡಿದ್ದಾರೆ.
		
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ