ಬೆಳಗಾವಿ -ಬೆಳಗಾವಿ ನಗರದಲ್ಲಿ 300ಕ್ಕೂ ಹೆಚ್ಚು ಅಭವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಇದೇ ವಾರದಲ್ಲಿ ನಗರ ಪ್ರದಕ್ಷಣೆ ಮಾಡಿ ಕಾಮಗಾರಿಗಳ ಪರಶೀಲನೆ ನಡೆಸುತ್ತೇನೆ ಕಳಪೆ ಕಾಮಗಾರಿಗಳು ನಡೆದಿದ್ದರೆ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಂಡು ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ
ಬೆಳಗಾವಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ನಂತರ ಪತ್ರಿಕಾಗೋಷ್ಠಿ ನಡೆಸಿದ ಅವರು ಮಂತ್ರಿಯಾಗಿ ಎರಡು ತಿಂಗಳಾಗಿದೆ ಮುಖ್ಯಮಂತ್ರಿಗಳನ್ನು ಬೇಟಿಯಾಗಿ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಚರ್ಚಿಸಲು ಸಾಧ್ಯವಾಗಿಲ್ಲ ಜಿಲ್ಲೆಯ ಸರ್ವಾಂಗೀಣ ಅಬಿವೃದ್ಧಿಗಾಗಿ ಯಾವ ಯಾವ ಅಭವೃದ್ಧಿ ಕೆಲಸಗಳು ಆಗಬೇಕಾಗಿದೆ ಎನ್ನುವದರ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದರು
ಬೆಳಗಾವಿ ನಗರದಲ್ಲಿ ಕೆಲವು ಕಡೆ ರಸ್ತೆ ಅಗಲೀಕರಣ ಕಾಮಗಾರಿಗಳು ನಡೆಯುತ್ತಿವೆ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದು ಅವರನ್ನು ಮನವೊಲಿಸಿ ಕಾಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲಾಗುವದು ಎಂದರು
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ನಾಕಾ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿದ್ದು ಕೂಡಲೇ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು
Check Also
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …