Breaking News
Home / ಬೆಳಗಾವಿ ನಗರ / 18 ರಂದು ಸಚಿವ ರೋಷನ್ ಬೇಗ್ ಬೆಳಗಾವಿಗೆ

18 ರಂದು ಸಚಿವ ರೋಷನ್ ಬೇಗ್ ಬೆಳಗಾವಿಗೆ

ಬೆಳಗಾವಿ: ಆಗಸ್ಟ : ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಹಾಗೂ ಹಜ್ ಸಚಿವರಾದ ಶ್ರೀ ರೋಶನ್ ಬೇಗ್, ಅವರು ಆಗಸ್ಟ 18 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ಆಗಮಿಸುವರು. ನಂತರ ಬೆಳಿಗ್ಗೆ 10-30 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್‍ನಲ್ಲಿ ಬೆಳಗಾವಿ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಕೆ.ಯು.ಐ.ಡಿ.ಎಫ್.ಸಿ, ಕ.ನ.ನೀ.ಸ ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸುವರು.
ಅಂದು ಮಧ್ಯಾಹ್ನ 12 ಗಂಟೆಗೆ ಮಹಾನಗರ ಪಾಲಿಕೆ ಸದಸ್ಯರೊಂದಿಗೆ ಸಭೆ, ನಂತರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸುವರು. ಸಂಜೆ 5 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ನಂತರ ಸಂಜೆ 6 ಗಂಟೆಗೆ ಬೆಳಗಾವಿಯಿಂದ ಹುಬ್ಬಳಿಗೆ ಪ್ರಯಾಣ ಬೆಳೆಸುವರು.

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *