ಬೆಳಗಾವಿ- ಉತ್ತರ ಕರ್ನಾಟಕ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಯಿಂದ ವಂಚಿತ ವಾಗಿದ್ದು ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯ ಹಿತದೃಷ್ಠಿಯಿಂದ ಪ್ರತ್ಯೇಕ ಬಜೆಟ್ ಮಂಡಿಸಬೇಕೆಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಒತ್ತಾಯಿಸಿದ್ದಾರೆ
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಆರೋಗ್ಯ,ಶಿಕ್ಷಣ,ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ತಾರತಮ್ಯ ನಿವಾರಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತ್ಯೇಕ ವಾಗಿ ಕೃಷಿ ಬಜೆಟ್ ಮಂಡಿಸಿದ ಹಾಗೆ ಉತ್ತರ ಕರ್ನಾಟಕದ ಪ್ರತ್ಯೇಕ ಬಜೆಟ್ ಮಂಡಿಸಿ ಉತ್ತರ ಕರ್ನಾಟಕ ದ ಜನತೆಗೆ ನ್ಯಾಯ ದೊರಕಿಸಿ ಕೊಡಲು ಸರ್ಕಾರ ಮುಂದಾಗಬೇಕು ಎಂದು ಶಾಸಕ ಅಭಯ ಪಾಟೀಲ ಆಗ್ರಹಪಡಿಸಿದ್ದಾರೆ
ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಶಾಸಕರು ಪ್ರತ್ಯೇಕ ಬಜೆಟ್ ಮಂಡಿಸಲು ಧ್ವನಿ ಎತ್ತುವಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳುವದಾಗಿ ಅಭಯ ಪಾಟೀಲ ತಿಳಿಸಿದ್ದಾರೆ
ಈಗಾಗಲೇ ಈ ವಿಷಯದ ಕುರಿತು ಉತ್ತರ ಕರ್ನಾಟಕದ ಶಾಸಕರಿಗೆ ಖುದ್ದಾಗಿ ಮಾತನಾಡಿದ್ದೇನೆ ಪ್ರತ್ಯೇಕ ಬಜೆಟ್ ಮಂಡನೆಗೆ ಹಲವಾರು ಜನ ಶಾಸಕರು ಪಕ್ಷಾತೀತವಾಗಿ ಸಕಾರಾತ್ಮಕ ವಾಗಿ ಸ್ಪಂದಿಸಿದ್ದು ಶೀಘ್ರದಲ್ಲಿಯೇ ಉತ್ತರ ಕರ್ನಾಟಕದ ಎಲ್ಲ ಶಾಸಕರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳುತ್ತೇನೆ ಉತ್ತರ ಕರ್ನಾಟಕದ ವಿಷಯದಲ್ಲಿ ಪಕ್ಷಾತೀತ ಹೋರಾಟ ನಡೆಯಬೇಕು ಬೆಳಗಾವಿಯ ಅಧಿವೇಶನದಲ್ಲಿ ಎಲ್ಲ ಶಾಸಕರು ಒಗ್ಗಟ್ಟಾಗಿ ಧ್ವನಿ ಎತ್ತಿದರೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಶಾಶ್ವತ ಪರಿಹಾರ ಸಿಗಲು ಸಾಧ್ಯ ಎಂದು ಶಾಸಕ ಅಭಯ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಕುರಿತು ಚರ್ಚೆ ನಡೆಯಬೇಕು ಎನ್ನುವದು ಈ ಭಾಗದ ಜನರ ಆಶಯ ಪ್ರತಿ ವರ್ಷ ಚರ್ಚೆ ನಡೆಯುತ್ತದೆ ಆದರೆ ಪರಿಹಾರ ಸಿಕ್ಕಿಲ್ಲ ಈ ಬಾರಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಬಜೆಟ್ ಮಂಡಿಸಿ ಎನ್ನುವ ಒನ್ ಪಾಯಿಂಟ್ ಅಜೆಂಡಾ ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗೆ ತರುವದಾಗಿ ಅಭಯ ಪಾಟೀಲ ಮಾಹಿತಿ ನೀಡಿದ್ದಾರೆ