ಬೆಳಗಾವಿ- ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾರ್ಚ 31ರಂದು ಬೆಳಗಾವಿಯ ಜೀರಗೆ ಭವನದಲ್ಲಿ ಮೈ ಚೌಕಿದಾರ್ ಹೂಂ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಸಾವಿರಾರು ಜನ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ
ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಜೀರಗೆ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರದ ಮೋದಿ ಸರ್ಕಾರದ ಸಾಧನೆಗಳನ್ನು ಮತ್ತು ಮೂರು ಅವಧಿಗಳಲ್ಲಿ ಸಂಸದ ಸುರೇಶ ಅಂಗಡಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ಕೊಡುತ್ತೇವೆ ಎಂದು ಅಭಯ ಪಾಟೀಲ ಹೇಳಿದರು
ಬಿಜೆಪಿ ಮುಖಂಡ ಎಂ ಬಿ ಝಿರಲಿ ಮಾತನಾಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಐಟಿ ದಾಳಿ ಕುರಿತು ಒಂದು ದಿನ ಮೊದಲೇ ರಹಸ್ಯ ಬಯಲು ಮಾಡಿ ಸಂವಿಧಾನದ ಉಲ್ಲಂಘನೆ ಮಾಡಿದ್ದು ಐಟಿ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದು ಚುನಾವಣಾ ಆಯೋಗ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವಾಗ ರಾಜ್ಯದ ಆಸ್ತಿ ಕಾಪಾಡುವ ಪ್ರಮಾಣ ಮಾಡಿರುತ್ತಾರೆ ಒಂದು ದಿನ ಮೊದಲೇ ಐಟಿ ದಾಳಿಯ ಬಗ್ಗೆ ಸಿಎಂ ಪ್ರಸ್ತಾಪಿಸಿ ರಹಸ್ಯವನ್ನು ಬಯಲು ಮಾಡಿದ್ದು ಕಾನೂನು ಬಾಹಿರವಾಗಿದ್ದು ಚುನಾವಣಾ ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕೆಂದರು