Breaking News

ಕುಕಡೊಳ್ಳಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಪರ್ವ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದಲ್ಲಿ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಅಂಗನವಾಡಿ ಕಟ್ಟಡ ಉದ್ಘಾಟಿಸುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲನ್ಯಾಸ ನೇರವೆರಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನರೇಗಾ ಯೋಜನೆಯಡಿಯಲ್ಲಿ ಕುಕಡೊಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡವನ್ನು ಲಕ್ಷ್ಮೀ ಹೆಬ್ಬಾಳಕರ ಉದ್ಘಾಟಿಸಿದರು. ಗ್ರಾಮದಲ್ಲಿ 40 ಲಕ್ಷ್ಮರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕುಕಡೊಳ್ಳಿ ಗ್ರಾಮ ಪಂಚಾಯತಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೇರವೆರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಇದೇ ಗ್ರಾಮದಲ್ಲಿ ರಂಗ ಮಂಟಪ ನಿರ್ಮಿಸುವ ಕಾಮಗಾರಿಗೂ ಚಾಲನೆ ನೀಡಲಾಯಿತು.
ಕುಕಡೊಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಈಗಾಗಲೇ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳು ಮಂಜೂರಾಗಿವೆ, ಕ್ಷೇತ್ರದ ಹಳ್ಳಿಗಳಲ್ಲಿ ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ ಚುನಾವಣೆಯ ಸಂದಂರ್ಭದಲ್ಲಿ ಕೊಟ್ಟ ಎಲ್ಲ ಭರವಸೆಗಳ ಈಡೇರಿಕೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಕೊಟ್ಟ ಮಾತಿನಂತೆ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುತ್ತೇನೆ ಎಂದು ಭರವಸೆ ನೀಡಿದರು.
ಕ್ಷೇತ್ರದ ರಸ್ತೆಗಳ ಸುಧಾರಣೆಗೆ ಯೋಜನೆ ರೂಪಿಸಲಾಗಿದೆ ಮಳೆಗಾಲ ಮುಗಿದ ಬಳಿಕ ಹಂತ ಹಂತವಾಗಿ ಎಲ್ಲ ರಸ್ತೆಗಳ ಸುಧಾರಣಾ ಕಾಮಗಾರಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು ಕ್ಷೇತ್ರದ ಎಲ್ಲ ಕೆರೆಗಳನ್ನು ತುಂಬಿಸುವ ಯೋಜನೆ ಮಂಜೂರಾಗಿದ್ದು ಸರ್ವೆ ಕಾರ್ಯ ನಡೆಯುತ್ತಿದೆ. ಸಾರ್ವಜನಿಕರು ಪಕ್ಷ ಬೇಧ ಮರೆತು ಒಗ್ಗಟ್ಟಾಗಿ ಅಭಿವೃದ್ಧಿಯ ವಿಷಯದಲ್ಲಿ ಸಹಕರಿಸಬೇಕು ಈ ವಿಷಯದಲ್ಲಿ ರಾಜಕಾರಣ ಮಾಡಬೇಡಿ ಎಂದು ಹೆಬ್ಬಾಳಕರ ಮನವಿ ಮಾಡಿಕೊಂಡರು.
ಈ ಸಂದಂರ್ಭದಲ್ಲಿ ಗ್ರಾಮದ ಹಿರಿಯರು ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಗ್ರಾಮ ಪಂಚಾಯತ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *