Breaking News

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಬೆಂಬಲವಿಲ್ಲ- ನಡಹಳ್ಳಿ

ಬೆಳಗಾವಿ- ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡದೇ ಉತ್ತರ ಕರ್ಣಾಟಕ ಪ್ರದೇಶದ ಅಭಿವೃದ್ಧಿ ಯಾವ ರೀತಿ ಮಾಡಬಹುದು ಎಂಬುವದನ್ನು ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ತೋರಿಸಿಕೊಟ್ಟಿದ್ದಾರೆ ಈ ಪ್ರದೇಶವನ್ನು ಪ್ರತ್ಯೇಕ ರಾಜ್ಯ ಮಾಡದೇ ಅಭಿವೃದ್ಧಿ ಪಡಿಸಬೇಕು ಪ್ರತ್ಯೇಕ ರಾಜ್ಯಕ್ಕೆ ನನ್ನ ಬೆಂಬಲವಿಲ್ಲ ಎಂದು ದೇವರಹಿಪ್ಪರಗಿ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ತಿಳಿಸಿದ್ದಾರೆ

ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಗುಲಾಮಗಿರಿಯ ವಾತಾವರಣ ಇದೆ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಧ್ವನಿ ಎತ್ತಿದ್ದಕ್ಕೆ ನನ್ನನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಯಿತು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಜೀವ ಇರೋವರೆಗೆ ಹೋರಾಟ ಮಾಡುತ್ತೇನೆ ಈ ಭಾಗದ ಅಭಿವೃದ್ಧಿಗಾಗಿ ಅಧಿಕಾರ ತ್ಯಾಗಕ್ಕೆ ಸಿದ್ಧವಾಗಿದ್ದೇನೆ ಎಂದು ನಡಹಳ್ಳಿ ತಿಳಿಸಿದರು
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 30 ದಿನ ಚಳಿಗಾಲದ ಅಧಿವೇಶನ ನಡೆಯಲಿ ಎಂದು ಮಾನ್ಯ ಸಭಾಪತಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದೇನೆ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಪ್ರದೇಶದ 96 ಜನ ಶಾಸಕರು ಮೌನ ಮುರಿದು ಈ ಭಾಗದ ಅಭಿವೃದ್ಧಿಯ ಬಗ್ಗೆ ಪಕ್ಷಾತೀತವಾಗಿ ಧ್ವನಿ ಎತ್ತಲಿ ಅನ್ನೋದು ನನ್ನ ಮನವಿಯಾಗಿದ್ದು ಈ ಕುರಿತು ಉತ್ತರ ಕರ್ನಾಟಕದ ಎಲ್ಲ ಶಾಸಕರಿಗೆ ಮನವಿ ಮಾಡಿಕೊಂಡಿದ್ದೇನೆ ಎಂದು ಶಾಸಕ ನಡಹಳ್ಳಿ ಹೇಳಿದರು
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇಂಡಸ್ಟ್ರೀಯಲ್ ಕಾರಿಡಾರ್ ಗಳು ಬರಬೇಕು ಈ ಭಾಗದ ಅಭಿವೃದ್ಧಿ ಮಾಡುವಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮತ್ತು ಹಾಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ನಡಹಳ್ಳಿ ಆರೋಪ ಮಾಡಿದರು
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕ ಅಭಿವೃದ್ಧಿಯ ದೃಷ್ಠಿಯಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದರು ಜೊತೆಗೆ ಸುವರ್ಣ ವಿಧಾನಸೌಧ ನಿರ್ಮಿಸಿದರು ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡದೇ ಈ ಭಾಗಕ್ಕೆ ಅನ್ಯಾಯ ಮಾಡಿವೆ ಎಂದು ಶಾಸಕ ನಡಹಳ್ಳಿ ಆಕ್ರೋಶ ವ್ಯೆಕ್ತಪಡಿಸಿದರು
ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಪಕ್ಷ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿ ಅವರು ಕಳಸಾ ಬಂಡೂರಿ ಮತ್ತು ಮಹಾದಾಯಿ ಸಮಸ್ಯೆಯನ್ನು ಅಧಿಕಾರಕ್ಕೆ ಬಂದ 24 ಘಂಟೆಯಲ್ಲಿ ಬಗೆಹರಿಸುತ್ತಾರೆ ಎಂದು ನಡಹಳ್ಳಿ ಭರವಸೆ ನೀಡಿದರು

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *