ವಿಧಾನಮಂಡಲದಲ್ಲಿ ಅನುಮೋದನೆ ಪಡೆದು,ರಾಜ್ಯಪಾಲರ ಅಂಕಿತಕ್ಕೆ ಹೋಗಿದ್ದ, ಶ್ರೀ ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡದೇ ವಾಪಸ್ ಕಳುಹಿಸಿದ್ದರು, ಸರ್ಕಾರದಿಂದ ಹೆಚ್ಚಿನ ಮಾಹಿತಿ ಪಡೆದ ಬಳಿಕ ರಾಜ್ಯಪಾಲರು ಯಲ್ಲಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಹಿಹಾಕಿದ್ದು,ದೇವಿಯ ದೇವಸ್ಥಾನದ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಸವದತ್ತಿ ಶಾಸಕ ವಿಶ್ವಾಸ್ ವೈದ್ಯರ ಪ್ರಯತ್ನಕ್ಕೆ ಕೊನೆಗೂ ಫಲ ಸಿಕ್ಕಿದೆ.
ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ ಮೂರು ವಿದೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ಕರ್ನಾಟಕ ಸಾರ್ವಜನಿಕ ಪರೀಕ್ಷಾ (ಭ್ರಷ್ಟಾಚಾರ) ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಪುರಸಭೆಗಳು ಹಾಗೂ ಇತರೆ ಕಾನೂನು ವಿಧೇಯಕಕ್ಕೆ ರಾಜ್ಯಪಾಲರು ಸೋಮವಾರ ಸಹಿ ಹಾಕಿದ್ದಾರೆ.
ಕೆಲವು ಸ್ಪಷ್ಟನೆ ಕೇಳಿ ವಿಧೇಯಕಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದರು. ಸರ್ಕಾರದ ಸ್ಪಷ್ಟನೆ ನಂತರ ವಿಧೇಯಕಗಳಿಗೆ ಅಂಕಿತ ಸಿಕ್ಕಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ