ಬೆಳಗಾವಿ- ಜಿಪಂ ತಾಪಂ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆಯೇ,ಬೆಳಗಾವಿ ಜಿಲ್ಲೆಯಲ್ಲಿ ವಿಧಾನ ಪರಿಷತ್ತಿನ ಚುನಾವಣೆಯ ಕಾವು ಗಪ್ ಚುಪ್ ಏರುತ್ತಿದೆ.ಸದ್ದಿಲ್ಲದೇ ತಯಾರಿ ನಡೆದಿದ್ದು ಚುನಾವಣೆಗೆ ಅಖಾಡಾ ರೆಡಿಯಾಗುತ್ತಿದೆ.
ಬೆಳಗಾವಿ ಜಿಲ್ಲೆಯಿಂದ ಸ್ಥಳೀಯ ಸಂಘ ಸಂಸ್ಥೆಗಳ ಪರವಾಗಿ ವಿಧಾನ ಪರಿಷತ್ತಿಗೆ ಆಯ್ಕೆ ಆಗಿರುವ ಮಹಾಂತೇಶ್ ಕವಟಗಿಮಠ,ಹಾಗೂ ವಿವೇಕರಾವ್ ಪಾಟೀಲ ಅವರ ಅವಧಿ ಪೂರ್ಣಗೊಳ್ಳಲಿದ್ದು ಜನೇವರಿ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದ್ದು ಬೆಳಗಾವಿ ಜಿಲ್ಲೆಯ ಪ್ರಬಲ ನಾಯಕರು ಸೆಡ್ಡು ಹೊಡೆಯಲು ತಾಲೀಮು ನಡೆಸಿದ್ದಾರೆ.
ಬಿಜೆಪಿ ಯಿಂದ ಹಾಲಿ ವಿಧಾನ ಪರಿಷತ್ತ್ ಸದಸ್ಯ ಮಹಾಂತೇಶ್ ಕವಟಗಿಮಠ ಅವರು ಕಳೆದ ಒಂದು ವರ್ಷದಿಂದಲೇ ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯತಿ ಗಳಿಗೆ ರೌಂಡ್ಸ್ ಹಾಕುತ್ತಿದ್ದಾರೆ.ಈ ಬಾರಿಯೂ ಅವರೇ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯುವದು ಬಹುತೇಕ ಖಚಿತವಾಗಿದೆ.
ಕಾಂಗ್ರೆಸ್ ಪಕ್ಷದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಅಭಿಮಾನಿಗಳು ಚನ್ನರಾಜ್ ಅಣ್ಣಾ ಮುಂದಿನ ಎಂ.ಎಲ್ ಸಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಈಗಿನಿಂದಲೇ ಪ್ರಮೋಟ್ ಮಾಡುತ್ತಿದ್ದಾರೆ.
ಕಳೆದ ಬಾರಿಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿ ಗೆಲವು ಸಾಧಿಸಿದ್ದ ವಿವೇಕರಾವ್ ಪಾಟೀಲ ಅವರ ಮುಂದಿನ ನಡೆ ನಿಗೂಢವಾಗಿದೆ,ಆದ್ರೆ ಈ ಬಾರಿಯ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ದೆ ಮಾಡ್ತಾರೆ ಎನ್ನುವ ಸುದ್ಧಿ ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ.
ಕಾಂಗ್ರೆಸ್ಸಿನ ಅಭ್ಯರ್ಥಿ ಆಗಲು ವೀರಕುಮಾರ್ ಪಾಟೀಲ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ದುಂಬಾಲು ಬಿದ್ದಿದ್ದು ಮುಂಬರುವ ವಿಧಾನ ಪರಿಷತ್ತಿನ ಚುನಾವಣೆಯ ಕಸರತ್ತು ಈಗಿನಿಂದಲೇ ನಡೆಯುತ್ತಿದೆ.