Breaking News
Home / Breaking News / MLC ಇಲೆಕ್ಷನ್, ನಾಮಪತ್ರ ಸಲ್ಲಿಸಿದವರು ಯಾರು ಗೊತ್ತಾ..?

MLC ಇಲೆಕ್ಷನ್, ನಾಮಪತ್ರ ಸಲ್ಲಿಸಿದವರು ಯಾರು ಗೊತ್ತಾ..?

ಅಭ್ಯರ್ಥಿಗಳು 10 ನಾಮಪತ್ರಗಳು 19….

ಬೆಳಗಾವಿ- ಸ್ಥಳೀಯ ಸಂಘ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಎರಡು ಸ್ಥಾನಗಳಿಗೆ ನಡೆಯುವ ಚುನಾವಣೆಯ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯವಾಗಿದ್ದು ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಒಟ್ಟು 10 ಜನ ಅಭ್ಯರ್ಥಿಗಳು ಒಟ್ಟು 19 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರು 3,ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ 4, ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ 4, ಪಕ್ಷೇತರ ಅಭ್ಯರ್ಥಿ ಜಗದೀಶ್ ಕವಟಗಿಮಠ 1, ನಾಮಪತ್ರ ಸಲ್ಲಿಸಿದ್ದಾರೆ.

ಈ ಹಿಂದೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹಲವಾರು ಜನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಆಮ್ ಆದ್ಮಿ ಪಾರ್ಟಿ ತನ್ನ ಅಭ್ಯರ್ಥಿಯನ್ನು ಪರಿಷತ್ತಿನ ಚುನಾವಣೆಯಲ್ಲೂ ಕಣಕ್ಕಿಳಿಸಿದೆ,ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ಶಂಕರ ಹೆಗಡೆ 2 ನಾಮಪತ್ರಗಳನ್ನು ಸಲ್ಲಿಸಿದ್ದು,ಸಂಗಮೇಶ್ ನಾಗಪ್ಪ ಚಿಕ್ಕನರಗುಂದ, ಶಂಕರ ಕುಡಸೋಮಣ್ಣವರ,ಗಾಣಗಿ ಕಲ್ಮೇಶ್,ಅಶೋಕ ಹಂಜಿ,ನಾಗಪ್ಪ ಕಳಸಣ್ಣವರ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

Check Also

ಅಕ್ರಮ ಗೋ ಸಾಗಾಟ ; ಟ್ರಕ್ ಚಾಲಕನ ಮೇಲೆ ನೈತಿಕ ಪೊಲೀಸ್ ಗಿರಿ

ಬೆಳಗಾವಿ : ಅಕ್ರಮ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ …

Leave a Reply

Your email address will not be published. Required fields are marked *