ಬೆಳಗಾವಿ: ಐತಿಹಾಸಿಕ ಕ್ರಾಂತಿಯ ನೆಲದಲ್ಲಿ ಹುಟ್ಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿ ಬೆಳಗಿದ ಕನ್ನಡಿಗರ ಹೆಮ್ಮೆಯ ಸಂಸ್ಥೆ ಆಗಿರುವ ಕೆಎಲ್ಇ ಸಂಸ್ಥೆಯ ಶತಮಾನೋತ್ಸವದ ವರ್ಣರಂಜಿತ ಕಾರ್ಯಕ್ರಮ ವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ 13ರಂದು ನಗರಕ್ಕೆ ಆಗಮಿಸುತ್ತಿದ್ದಾರೆ.
ಹಳ್ಳಿಯಿಂದ ದಿಲ್ಲಿಯವರೆಗೆ, ದಿಲ್ಲಿಯಿಂದ ದುಬೈವರೆಗೆ ನೂರಾರು ಶಾಖೆಗಳನ್ನು ತೆರೆದು ವೈದ್ಯಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಖ್ಯಾತಿ ಗಳಿಸಿರುವ ಹೆಮ್ಮೆಯ ಕೆಎಲ್ಇ ಶತಮಾನೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಖ್ಯಾತನಾಮರು ಪಾಲ್ಗೊಳ್ಳಲಿದ್ದಾರೆ.
ಕೆಎಲ್ಇ ದಿಗ್ಗಜ ಪ್ರಭಾಕರ ಕೋರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಆಮಂತ್ರಿಸಿದ್ದು, ಬೆಳಗಾವಿಗೆ ಬರಲು ಒಪ್ಪಿಕೊಂಡಿದ್ದಾರೆ ಎಂದು ಸಂಸ್ಥೆಯ ನಂಬಲರ್ಹ ಮೂಲಗಳು ಬೆಳಗಾವಿ ಸುದ್ದಿಗೆ ಖಚಿತಪಡಿಸಿವೆ.