ಬೆಳಗಾವಿ- ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆಯಿಂದ ಆಶ್ರಯ ಮನೆಗಳನ್ನು ಮಂಜೂರು ಮಾಡಿಸುವದಾಗಿ ಸಾರ್ವಜನಿಕರಿಂದ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಮನಬಂದಂತೆ ಥಳಿಸಿದ ಘಟನೆ ಇಂದು ಬೆಳ್ಳಂ ಬೆಳಿಗ್ಗೆ ನಡೆದಿದೆ
ಬೆಳಗಾವಿಯಲ್ಲಿ ಹಲವಾರು ವರ್ಷಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ,ಪಾದಯಾತ್ರೆ,ಪಾಲಿಕೆಗೆ ಹತ್ತು ಹಲವು ಬಾರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದ ಮಹ್ಮದ ರಪೀಕ ದೇಸಾಯಿ ನೂರಾರು ಜನ ಮಹಿಳೆಯರಿಂದ ಆಶ್ರಯ ಮನೆ ಕೊಡಿಸುವದಾಗಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ್ದ ಎಂದು ಮಹಿಳೆಯರು ಆರೋಪಿಸಿದ್ದಾರೆ
ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆ ಬಳಿ ಮಹ್ಮದ ರಪೀಕ ದೇಸಾಯಿಗೆ ಮುತ್ತಿಗೆ ಹಾಕಿದ ಸಾರ್ವಜನಿಕರು ಆತನನ್ನು ಅರಬೆತ್ತಲೆ ಮಾಡಿ ಮನಬಂದಂತೆ ಥಳಿಸಿ ಆತನ ಕೊರಳಿಗೆ ಚಪ್ಪಲಿ ಹಾರ ಹಾಕಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಮರಕ್ಕೆ ಕಟ್ಟಿದ ಘಟನೆ ನಡೆದಿದೆ
ಘಟನಾ ಸ್ಥಳಕ್ಕೆ ಆಗಮಿಸಿದ ಮಾರ್ಕೆಟ್ ಪೋಲೀಸರು ಮಹ್ಮದ ರಪೀಕ ದೇಸಾಯಿಯನ್ನು ತಮ್ಮ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ