Breaking News

ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸರ್ಕಾರದ ಅನುದಾನದಲ್ಲಿ 9 ಅಂಬ್ಯುಲೆನ್ಸ್ ಕೊಟ್ರು….!!

ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರ ಪ್ರದೇಶಾಭಿವೃದ್ಧಿ ನಿಧಿಯಿಂದ 9 ಅಂಬ್ಯುಲೆನ್ಸ್ ವಿತರಣೆ

ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಒದಗಿಸಲು ಸುಸಜ್ಜಿತ ಅಂಬ್ಯುಲೆನ್ಸ್: ಸಂಸದ ಅಣ್ಣಾಸಾಹೇಬ್ ಜೊಲ್ಲೆ

ಬೆಳಗಾವಿ, -ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ ಅವರು 2019-20 ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಒಟ್ಟಾರೆ 9 ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಂಬ್ಯಲೆನ್ಸ್ ಗಳನ್ನು ನೀಡಿದ್ದಾರೆ.

ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಶುಕ್ರವಾರ (ಜು.15) ನಡೆದ ಸಮಾರಂಭದಲ್ಲಿ ಅವರು ಅಂಬ್ಯುಲೆನ್ಸ್ ಗಳನ್ನು ಹಸ್ತಾಂತರಿಸಿದರು.

ಗ್ರಾಮೀಣ ಜನರಿಗೆ ಸಕಾಲದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಅನುಕೂಲವಾಗುವಂತೆ ತಲಾ 16.50 ಲಕ್ಷ ವೆಚ್ಚದ ಸುಸಜ್ಜಿತವಾದ ಅಂಬ್ಯುಲೆನ್ಸ್ ಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರು, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಭಾಗದ ಜನರಿಗೆ ತುರ್ತು ಸಂದರ್ಭದಲ್ಲಿ ಸಕಾಲದಲ್ಲಿ ಉತ್ತಮ ಚಿಕಿತ್ಸೆ ಒದಗಿಸಲು ಅಂಬ್ಯುಲೆನ್ಸ್ ಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.

ಕೋವಿಡ್ ಹಾಗೂ ಪ್ರವಾಹದಂತಹ ಸನ್ನಿವೇಶದಲ್ಲಿ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಮುದಾಯ ಆರೋಗ್ಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಾಹನಗಳನ್ನು ನೀಡಲಾಗುತ್ತಿದೆ.

ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ವಾಹನಗಳನ್ನು ಬಳಸಿಕೊಂಡು ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು ಎಂದು ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ ಅವರು ತಿಳಿಸಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

9 ಆರೋಗ್ಯ ಕೇಂದ್ರಗಳಿಗೆ ಅಂಬ್ಯುಲೆನ್ಸ್ ಹಸ್ತಾಂತರ:

ಸಮುದಾಯ ಆರೋಗ್ಯ ಕೇಂದ್ರ ಯಕ್ಸಂಬಾ, ಪ್ರಾಥಮಿಕ ಆರೋಗ್ಯ ಕೇಂದ್ರ ಸದಲಗಾ, ಪ್ರಾಥಮಿಕ ಆರೋಗ್ಯ ಕೇಂದ್ರ ಅಂಕಲಿ(ತಾ- ಚಿಕ್ಕೋಡಿ); ಪ್ರಾಥಮಿಕ ಆರೋಗ್ಯ ಕೇಂದ್ರ ಯಮಕನಮರಡಿ, ತಾ-ಹುಕ್ಕೇರಿ; ಪ್ರಾಥಮಿಕ ಆರೋಗ್ಯ ಕೇಂದ್ರ ಬ್ಯಾಕೂಡ ತಾ-ರಾಯಬಾಗ; ಸಮುದಾಯ ಆರೋಗ್ಯ ಕೇಂದ್ರ ಮುಗಳಖೋಡ ತಾ-ರಾಯಬಾಗ; ಪ್ರಾಥಮಿಕ ಆರೋಗ್ಯ ಕೇಂದ್ರ ಐಗಳಿ ತಾ-ಅಥಣಿ; ಸಮುದಾಯ ಆರೋಗ್ಯ ಕೇಂದ್ರ ಕಾಗವಾಡ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಅಮ್ಮಣಗಿ-ನಿಡಸೋಶಿ ಗೇಟ್ ತಾ-ಹುಕ್ಕೇರಿ.
*****

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *