ಬೆಳಗಾವಿ- ಇಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವಿಶೇಷ ವಿಮಾನ ಮೂಲಕ ಆಗಮಿಸಿದ ಪ್ರೀಯಾಂಕಾ ಗಾಂಧಿ ಅವರನ್ನು ಸಿಎಂ ಸಿದ್ರಾಮಯ್ಯ ಸೇರಿದಂತೆ ಇತರ ಗಣ್ಯರು ಸ್ವಾಗತಿಸಿದರು.
ಗಣ್ಯರು ಸ್ವಾಗತಿಸಿದ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮೃಣಾಲ ಜೊತೆ ಪ್ರತ್ಯೇಕವಾಗಿ ಸಮಾಲೋಚಿಸಿದ ಪ್ರೀಯಾಂಕಾ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯವನ್ನು ವಿಚಾರಿಸಿದರು.
ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸಿ ಪರಾಭವಗೊಂಡಿದ್ದ ಮೃಣಾಲ್ ಹೆಬ್ಬಾಳಕರ್ ಅವರಿಗೆ ಧೈರ್ಯ ತುಂಬಿದ ಅವರು ಕ್ಷೇತ್ರದಲ್ಲಿ ಸಂಚರಿಸಿ ಸಂಘಟನೆಯನ್ನು ಬಲಿಷ್ಠಗೊಳಿಸುವಂತೆ ಮಾರ್ಗದರ್ಶನ ಮಾಡಿದ್ರು ಎಂದು ತಿಳಿದು ಬಂದಿದೆ.