ನಾಳೆ ಬೆಳಗಾವಿಗೆ ಡಿ.ಕೆ ಬರ್ತಾರೆ, ಮೀಟೀಂಗ್ ಮಾಡ್ತಾರೆ….!!

ಬೆಳಗಾವಿ: ನಾಳೆ ಸೋಮವಾರದಿಂದ ಬೆಳಗಾವಿಯಲ್ಲಿ ಲೋಕಸಭಾ ಚುನಾವಣೆ ರಂಗೇರಲಿದೆ.ಬೆಳಗಾವಿ ಲೋಕಸಭಾ ಕ್ಷೇತ್ರದ ಜನ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಸಲಿದ್ದಾರೆ.

ಅಂದು ಬೆಳಗ್ಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನ ಮತ್ತು ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ 11 ಗಂಟೆಗೆ ಮೆರವಣಿಗೆಯಲ್ಲಿ ಆಗಮಿಸಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು.ಹಿಂಡಲಗಾ ಗಣಪತಿ ಮಂದಿರದಿಂದ ಭವ್ಯ ಮೆರವಣಿಗೆ ಆರಂಭವಾಗಿ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಳ್ಳಲಿದೆ.ಮೆರವಣಿಗೆಯಲ್ಲಿ ಸಹಸ್ರಾರು ಜನ ಪಾಲ್ಗೊಳ್ಳುತ್ತಾರೆ.ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಇನ್ನಿತರ ಗಣ್ಯರು ಮೆರವಣಿಗೆಯಲ್ಲಿ ಸಾಗಲು ವಿಶೇಷ ವಾಹನವನ್ನು ಸಿದ್ಧಪಡಿಸಲಾಗಿದೆ.

ಉಪಮುಖ್ಯಮಂತ್ರಿಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಸುವ ವೇಳೆ ಹಾಜರಿರಲಿದ್ದಾರೆ.ಇಂದು ಭಾನುವಾರ ರಾತ್ರಿ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸುವ ಶಿವಕುಮಾರ, ಸೋಮವಾರ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿ ನಂತರ ವಿಶೇಷ ವಿಮಾನದ ಮೂಲಕ ಶಿವಮೊಗ್ಗಕ್ಕೆ ತೆರಳುವರು.

ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ನಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು, ರಾಜ್ಯದ ಇನ್ನೂ ಕೆಲವು ನಾಯಕರು ಸಹ ಪಾಲ್ಗೊಳ್ಳಲಿದ್ದಾರೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *