
ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಕಮಿಷ್ನರೇಟ್ ವ್ಯಾಪ್ತಿಯ ಸುಳೆಭಾವಿ ಗ್ರಾಮದಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ನಡೆದಿದೆ.
ಸುಳೆಭಾವಿ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ಹಂತಕರು ಇಬ್ಬರು ಯುವಕರ ಮೇಲೆ ಅಟ್ಯಾಕ್ ಮಾಡಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ,ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ಘರ್ಷಣೆಗೆ ಹಳೆಯ ವೈಷಮ್ಯಮೇ ಕಾರಣವೆಂದು ತಿಳಿದು ಬಂದಿದೆ.
ಸುಳೆಭಾವಿ ಗ್ರಾಮದ ಮಹೇಶ್ ರಾಮಚಂದ್ರ ಮುರಾರಿ,25, ಪ್ರಕಾಶ್ ನಿಂಗಪ್ಪಾ ಉಪರಿ ಪಾಟೀಲ 22 ಎಂಬಾತರು ಹತ್ಯೆಗೀಡಾದ ದುರ್ದೈವಿಗಳು ಎಂದು ಗುರುತಿಸಲಾಗಿದ್ದು ಹಿರಿಯ ಪೋಲೀಸ್ ಅಧಿಕಾರಿಗಳು ಸುಳೆಭಾವಿ ಗ್ರಾಮಕ್ಕೆ ದೌಡಾಯಿಸಿದ್ದಾರೆ.
ಘಟನೆಗೆ ಸ್ಪಷ್ಟಕಾರಣ ಗೊತ್ತಾಗಿಲ್ಲ. ಪರಿಸ್ಥಿತಿ ಈಗ ಉದ್ವಿಗ್ನವಾಗಿದ್ದು ಮಾರಿಹಾಳ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹಂತಕರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ