ನಾಲ್ಕೈದು ಜನ ಸೇರಿ ಈ ಯುವಕನನ್ನು ಮರ್ಡರ್ ಮಾಡಿದ್ರು…!

ಬೆಳಗಾವಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರ ದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಾರೀಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಉತ್ತರಾಖಂಡದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಜಸ್ಟ್ ಮಿಸ್….!!!

ಬೆಳಗಾವಿ- ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ನಿ ಸಮೇತ ಡೆಹ್ರಾಡೂನ್ ಗೆ ಹೋಗಿದ್ರು, ಅಲ್ಲಿ ಮೀಟೀಂಗ್ ಮುಗಿಸಿ ಒಟ್ಟು ಎಂಟು …

Leave a Reply

Your email address will not be published. Required fields are marked *