ಬೆಂಗಳೂರು- ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ. ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ನಡೆದಿದೆ
ಸಿಎಂ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು,ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ನಿದ್ದೆ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥರಾಗಿರುವ ಅವರನ್ನು ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಎನ್ ಆರ್ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ ವಿಚಾರ ಗೊತ್ತಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಯಡಿಯೂರಪ್ಪ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಸಂಧರ್ಬದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸಿಎಂ ,ಸಂತೋಷ ಹೀಗೇಕೆ ಮಾಡಿದ,ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು ಯಾತಕ್ಕೆ ಅನ್ನೋದನ್ನು ವಿಚಾರಿಸುತ್ತೇನೆ ಎಂದು ಹೇಳಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ