Breaking News

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹೈ ಪವರ್ ಪಾಲಿಟೀಕ್ಸ್…..!!

ಬೆಳಗಾವಿ- ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗೋಕಾಕ ಸಾಹುಕಾರ, ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಮತ್ತೆ ತಮ್ಮ ರಾಜಕೀಯ ಚದುರಂಗದಾಟಕ್ಕೆ ಮುನ್ನುಡಿ ಬರೆದಿದ್ದಾರೆ.ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮರಾಠಾ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು ಈ ಮತಗಳನ್ಬು ಬಿಜೆಪಿ ಬುಟ್ಟಿಗೆ ಬೀಳಿಸಲು ಸಾಹುಕಾರ್ ರಮೇಶ್ ಜಾರಕಿಹೊಳಿ ತಂತ್ರ ರೂಪಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ತಮ್ಮ ಪರಮಾಪ್ತ, ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ ಮಂಡೋಳ್ಕರ ಅವರನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿಸಲು ಚಿಂತನೆ ನಡೆಸಿರುವ ರಮೇಶ್ ಜಾರಕಿಹೊಳಿ. ರಾಜಕೀಯ ಬೆಳವಣಿಗೆಯೊಂದರಲ್ಲಿ ನಾಗೇಶ ಮನ್ನೋಳ್ಕರ್ ಅವರನ್ನು ತಮ್ಮ ಜೊತೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿಸಿರುವ ಪೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಮರಾಠ ಸಮುದಾಯದ ನಾಗೇಶ ಮಂಡೋಳ್ಕರ ಚುನಾವಣೆಗೆ ಸ್ಪರ್ಧಿಸಿದರೆ ಬಿಜೆಪಿ ಗೆಲುವು ಸುಲಭವಾಗುತ್ತದೆ. ಬೆಳಗಾವಿ ಗ್ರಾಮೀಣದಲ್ಲಿ ಮರಾಠರೇ ಪ್ರಮುಖ ನಿರ್ಣಾಯಕರಾಗಿದ್ದಾರೆ.ಹಾಗಾಗಿ, ಮಂಡೋಳ್ಕರ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಈ ರಾಜಕೀಯ ಬೆಳವಣಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ತೀವ್ರ ಸಂಚಲನ ಮೂಡಿಸಿದ್ದು ನಾಗೇಶ್ ಮುನ್ನೋಳ್ಕರ್ ಕುಟುಂಬದ ಸದಸ್ಯರು ಮುನ್ನೋಳ್ಕರ್ ಸಹೋದರರು ಮೊದಲಿನಿಂದಲೂ ಬಿಜೆಪಿ ಪಕ್ಷದಲ್ಲಿದ್ದಾರೆ.

ಸಾಹುಕಾರ್ ರಮೇಶ್ ಜಾರಕಿಹೊಳಿ ನಾಗೇಶ್ ಮನ್ನೋಳ್ಕರ್ ಅವರು ಇಂದು ಗುರುವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿಸಿ,ಪರಿಚಯ ಮಾಡಿಕೊಟ್ಟಿದ್ದಾರೆ.ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸುವ ಕುರಿತು ಸಿಎಂ ಜೊತೆ ಸುಧೀರ್ಘ ಚರ್ಚೆ ಮಾಡಿದ್ದಾರೆಂದು ಗೊತ್ತಾಗಿದೆ.

ಇತ್ತೀಚಿಗೆ ನಾಗೇಶ್ ಮನ್ನೋಳ್ಕರ್ ಅವರ ಮಾಲಿಕತ್ವದ ಗೊಡಂಬಿ ಕಾರ್ಖಾನೆ ಉದ್ಘಾಟಿಸಿದ ರಮೇಶ್ ಜಾರಕಿಹೊಳಿ ಇವತ್ತು ನಾಗೇಶ್ ಮನ್ನೋಳ್ಕರ್ ಅವರನ್ನು ಸಿಎಂ ಗೆ ಭೇಟಿ ಮಾಡಿಸಿ ಮನ್ನೋಳ್ಕರ್ ಪಾಲೀಟೀಕ್ಸ್ ಫ್ಯಾಕ್ಟರಿಯನ್ನು ಶುರು ಮಾಡಿದಂತಾಗಿದೆ.

ಒಟ್ಟಾರೆ ಇವತ್ತು ಸೋಶಿಯಲ್ಲಿ ಮೀಡಿಯಾದಲ್ಲಿ ವೈರಲ್ ಆಗಿರುವ ಒಂದು ಪೋಟೋ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಲವಾರು ರೀತಿಯ ಚರ್ಚೆಗೆ ಕಾರಣವಾಗಿದೆ. ಈ ಪೋಟೋ ಬಗೆ ಬಗೆಯ ರಾಜಕೀಯ ವಿಶ್ಲೇಷಣೆಗೆ ದಾರಿಯಾಗಿದೆ.

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *